Bengaluru ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಕೀರ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

Bengaluru ವರದಕ್ಷಿಣೆ ಕಿರುಕುಳದಿಂದ ಮಾನಸಿಕವಾಗಿ ನೊಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆ ಮನೆೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕೀರ್ತಿ ಅವರ ಶವ ಪತ್ತೆಯಾಗಿದೆ.
ಕೀರ್ತಿ ಅವರು 2023ರ ನವೆಂಬರ್ನಲ್ಲಿ ಗುರುಪ್ರಸಾದ್ರೊಂದಿಗೆ ವಿವಾಹವಾಗಿದ್ದರು. ಮದುವೆಗೆ ಕೀರ್ತಿ ಪೋಷಕರು ಸುಮಾರು 30 ರಿಂದ 35 ಲಕ್ಷ ರೂಪಾಯಿ ವೆಚ್ಚ ಮಾಡಿದ್ದರು ಎಂದು ತಿಳಿದುಬಂದಿದೆ.
ಮತ್ತೆ 10 ಲಕ್ಷ ಬೇಡಿಕೆ – ಮನೆ ಕಟ್ಟಲು ಹಣ ಕೇಳಿದ್ದ ಪತಿ
ವಿವಾಹದ ಬಳಿಕವೂ ವರದಕ್ಷಿಣೆ ಕಿರುಕುಳ ಮುಂದುವರಿದಿದ್ದು, ಡಿಸೆಂಬರ್ 2025ರಲ್ಲಿ ಪತಿ ಗುರುಪ್ರಸಾದ್ ಮತ್ತೆ 10 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದಾನೆ. ಮನೆ ಕಟ್ಟಿಸುವುದಕ್ಕಾಗಿ ಹಣ ನೀಡುವಂತೆ ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಪೋಷಕರು 8 ಲಕ್ಷ ರೂಪಾಯಿ ಹಣವನ್ನು ನೀಡಿದ್ದಾರೆ.
ಇದನ್ನು ಓದಿ : ಬಿಜೆಪಿ ಶಾಸಕ Suresh Kumar ವಿರುದ್ಧ ದೂರು ದಾಖಲು

ಯಡಿಯೂರು ಕೆರೆ ಬಳಿ ಮನೆಯಲ್ಲಿ ಆತ್ಮಹತ್ಯೆ
ನಿನ್ನೆ ಬೆಳಿಗ್ಗೆ ಯಡಿಯೂರು ಕೆರೆ ಸಮೀಪದ ಮನೆಯಲ್ಲಿ ಕೀರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಳಿಕ ಪತಿ ಗುರುಪ್ರಸಾದ್ ಅವರು, “ಆಸ್ಪತ್ರೆಗೆ ಸೇರಿಸಲಾಗಿದೆ” ಎಂದು ಕೀರ್ತಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕೀರ್ತಿಯ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಪೋಷಕರು ಶವವನ್ನು ತಮ್ಮ ಸ್ವಗ್ರಾಮಕ್ಕೆ ಕರೆದೊಯ್ದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಪತಿ ಗುರುಪ್ರಸಾದ್ ಹಾಗೂ ಅವರ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : ತುಮಕೂರು ಹೊರವಲಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ




