ಮೈಸೂರು ಜಿಲ್ಲೆಯಲ್ಲಿ ಬೈಕ್ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಬೈಕ್ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೃತ ದುರ್ದೈವಿ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಅವರ ಪತ್ನಿ ಅಶ್ವಿನಿ (36) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಅಶ್ವಿನಿ ಬೈಕ್ನ ಹಿಂಬದಿ ಸವಾರರಾಗಿದ್ದರು.
ಅಪಘಾತ ಹೇಗೆ ?
ಜೀವನ್ ಅವರು ತಮ್ಮ ಪತ್ನಿ ಮತ್ತು ಮಗುವಿನೊಂದಿಗೆ ಬೈಕ್ನಲ್ಲಿ ಹುಣಸೂರು ಕಡೆಗೆ ಪ್ರಯಾಣಿಸುತ್ತಿದ್ದಾಗ, ಪಿರಿಯಾಪಟ್ಟಣ ಕಡೆಯಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ.
ಈ ದುರ್ಘಟನೆ ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ಸಂಭವಿಸಿದೆ.
ಇದನ್ನು ಓದಿ : ಮಹಿಳೆಗೆ ಲೈಂಗಿಕ ಕಿರಕುಳ – Dhurandhar ಕಲಾವಿದನ ಬಂಧನ
ಅಪಘಾತದಲ್ಲಿ ಜೀವನ್ ಹಾಗೂ ಅವರ ಮಗು ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸ್ ಕ್ರಮ
ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ವಾಹನ ಚಾಲಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.
ಇದನ್ನು ನೋಡಿ : ತುಮಕೂರು ಗ್ರಾಮಾಂತರದಲ್ಲಿ ದಳಪತಿಗೆ ಭರ್ಜರಿ ರೆಸ್ಪಾನ್ಸ್




