Davanagere : ಮತ್ತೊಬ್ಬನ ಜೊತೆ ಪತ್ನಿ ಪರಾರಿ – ನೇಣಿಗೆ ಶರಣಾದ ಪತಿ.

ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಪತಿ ಮನನೊಂದು ನೇಣಿಗೆ ಶರಣಾದ ಘಟನೆ Davanagere ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ.
ಮತ್ತೊಬ್ಬನ ಜೊತೆ ಪತ್ನಿ ಪರಾರಿ – Davanagere
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹರೀಶ್ (32) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಮುನ್ನ ಹರೀಶ್ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಪತ್ನಿ ಮತ್ತೊಬ್ಬ ಯುವಕನೊಂದಿಗೆ ಪರಾರಿಯಾಗಿರುವುದೇ ತನ್ನ ಸಾವಿಗೆ ಕಾರಣ ಎಂದು ಉಲ್ಲೇಖಿಸಿದ್ದಾನೆ. ಅಲ್ಲದೇ ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಆರೋಪಿಸಿದ್ದಾನೆ.
ಇದನ್ನು ಓದಿ : ಹೋರಾಡಿ ಸೋತ RCB – ಸೋಲಿನ ನಡುವೆಯೂ ವಿಶೇಷ ದಾಖಲೆ

ಡೆತ್ ನೋಟ್ನಲ್ಲಿ ಏನಿದೆ..?
ಪತ್ನಿಯಿಂದ ತನ್ನ ಮೇಲೆ ಇಲ್ಲಸಲ್ಲದ ಆರೋಪಗಳು ಹಾಗೂ ಪ್ರಾಣ ಬೆದರಿಕೆಗಳು ಬಂದಿದ್ದವು ಎಂದು ಹರೀಶ್ ಡೆತ್ ನೋಟ್ನಲ್ಲಿ ಬರೆದುಕೊಂಡಿದ್ದು, ಮಾನಸಿಕವಾಗಿ ನೊಂದ ಕಾರಣ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾನೆ. ತನ್ನ ಅಂತ್ಯಸಂಸ್ಕಾರವನ್ನು ಬಸವ ಧರ್ಮದ ಪ್ರಕಾರ ನೆರವೇರಿಸಬೇಕು ಎಂಬ ಮನವಿಯನ್ನೂ ಡೆತ್ ನೋಟ್ನಲ್ಲಿ ಮಾಡಿದ್ದಾನೆ.
ಪ್ರಕರಣ ದಾಖಲು
ಇನ್ನು ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಹರೀಶ್ ಸಾವಿನಿಂದ ಮನನೊಂದು, ಮುಂದೆ ನಿಂತು ಮದುವೆ ಮಾಡಿಸಿದ್ದ ಮಹಿಳೆಯ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ನೋಡಿ : ಹಾಡಹಗಲೇ ಪಿಸ್ತೂಲ್ ತೋರಿಸಿ ದರೋಡೆ – 205 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ ದೋಚಿದ ಖದೀಮರು





