ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರಿಡಲಾಗುವುದು ಎಂದು ಡಿಸಿಎಂ DK Shivakumar ಘೋಷಣೆ ಮಾಡಿದ್ದಾರೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರನ್ನು ನಾಮಕರಣ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ DK Shivakumar ಘೋಷಿಸಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ಡಿಕೆಶಿ ಹೇಳಿಕೆ
ಮನ್ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಡಿಕೆಶಿ,
ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಅವರ ಹೆಸರು ಇಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಕೇಂದ್ರದ ವಿರುದ್ಧ ಡಿಕೆಶಿ ವಾಗ್ದಾಳಿ
ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸುತ್ತಿದ್ದು, ಪಂಚಾಯಿತಿಗಳ ಅಧಿಕಾರವನ್ನು ಕಸಿದುಕೊಂಡು ಬಡವರ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದರು.
ಮನ್ರೇಗಾ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
“ಅಗತ್ಯವಿದ್ದರೆ ಬಂಧನಕ್ಕೂ ಸಿದ್ಧ” ಎಂದು ಅವರು ಕಠಿಣ ಸಂದೇಶ ನೀಡಿದರು.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರ ದುರುದ್ದೇಶದಿಂದ ವಿಜಿಬಿ ಜಿ ರಾಮ್ ಜಿ ಎಂಬ ಯೋಜನೆಯನ್ನು ಜಾರಿಗೆ ತಂದಿದೆ ಎಂದು ವಾಗ್ದಾಳಿ ನಡೆಸಿದರು.
“ಇಲ್ಲಿ ರಾಮ ಎಂಬುದು ಕೇವಲ ಹೆಸರಷ್ಟೇ, ಬಡವರ ಹಿತದ ಬಗ್ಗೆ ಯಾವುದೇ ಚಿಂತನೆ ಇಲ್ಲ” ಎಂದು ಹೇಳಿದರು.
ದಶರಥ ರಾಮ, ಕೌಸಲ್ಯ ರಾಮ ಅಥವಾ ಸೀತಾರಾಮ ಯಾರೂ ಈ ಕಾಯ್ದೆಯಲ್ಲಿ ಇಲ್ಲ ಎಂದು ಅವರು ವ್ಯಂಗ್ಯವಾಡಿದರು.

ರಾಜ್ಯಪಾಲರಿಗೆ ದೂರು ಸಲ್ಲಿಕೆ
ಮನ್ರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಲೋಕಭವನದಲ್ಲಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ಬಡವರು, ದಲಿತರು ಮತ್ತು ರೈತರ ಪರ ನಿಜವಾದ ಹೋರಾಟ ಮಾಡುವ ಪಕ್ಷ ಕಾಂಗ್ರೆಸ್ ಮಾತ್ರ ಎಂದು ಸಿಎಂ ಹೇಳಿದರು.
ಬಡವರ ಪರದ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡಿದ್ದು, ಇದಕ್ಕೆ ಆರ್ಎಸ್ಎಸ್ ಮಾರ್ಗದರ್ಶನ ಇದೆ ಎಂದು ಗಂಭೀರ ಆರೋಪ ಮಾಡಿದರು.




