Koppal ಜಿಲ್ಲೆಯ ಕನಕಗಿರಿಯಲ್ಲಿ ಆಸ್ತಿ ವಿಚಾರವಾಗಿ ಮಗನ ವಿರುದ್ಧ ದೂರು ನೀಡಿದ ಮರುದಿನವೇ ತಂದೆ ವೆಂಕೋಬಾ ಹಂಚಿನಾಳ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

Koppal : ಆಸ್ತಿಗಾಗಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ ಎಂಬ ಗಂಭೀರ ಆರೋಪ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವರಣಖೇಡ ಗ್ರಾಮದಲ್ಲಿ ಕೇಳಿಬಂದಿದೆ.
ಮಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಮರುದಿನವೇ ತಂದೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ.
ಮೃತರನ್ನು ವೆಂಕೋಬಾ ಹಂಚಿನಾಳ (50) ಎಂದು ಗುರುತಿಸಲಾಗಿದೆ. ಸೋಮವಾರ (ಜ.26) ಸಂಜೆ ತಮ್ಮ ಜಮೀನಿನಲ್ಲಿ ಅವರು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.
ಈ ಸಾವಿನ ಹಿಂದೆ ಕೊಲೆ ಸಂಚು ಇರುವ ಶಂಕೆ ವ್ಯಕ್ತವಾಗಿದೆ.
ಎರಡು ದಿನಗಳ ಹಿಂದಷ್ಟೇ ಪೊಲೀಸರಿಗೆ ದೂರು
ಸಾವು ಸಂಭವಿಸುವ ಎರಡು ದಿನಗಳ ಹಿಂದಷ್ಟೇ ವೆಂಕೋಬಾ ಹಂಚಿನಾಳ ಅವರು ಕನಕಗಿರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆಸ್ತಿ ವಿಚಾರವಾಗಿ ಮಗ ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆ, ದೂರು ನೀಡಿದ ತಕ್ಷಣವೇ ಸಂಭವಿಸಿದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದನ್ನು ಓದಿ : Bengaluru ನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ suicide..!
ಈ ಘಟನೆ ಬಳಿಕ ಸಂಬಂಧಿಕರು, ಆಸ್ತಿಗಾಗಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಂದೆ-ಮಗನ ನಡುವೆ ಹತ್ತು ಎಕರೆ ಆಸ್ತಿ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.
ಮೃತನ ತಾಯಿಯಿಂದ ಮತ್ತೊಂದು ದೂರು
ಇನ್ನೂ ಈ ಸಂಬಂಧ ಮೃತನ ತಾಯಿ ಸೂರಮ್ಮ ಅವರು ಮತ್ತೊಂದು ದೂರು ದಾಖಲಿಸಿದ್ದಾರೆ. ದೂರಿನಲ್ಲಿ, ತನ್ನ ಮಗ ವೆಂಕೋಬಾ ಅವರಿಗೆ ವಿಷ ಹಾಕಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದು, ಈ ಸಾವಿಗೆ ಸೊಸೆ, ಮೊಮ್ಮಗ ಹಾಗೂ ಮೊಮ್ಮಗನ ಹೆಂಡತಿಯೇ ಕಾರಣ ಎಂದು ತಿಳಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿದ ಕನಕಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನುಮಾನಾಸ್ಪದ ಸಾವು ಪ್ರಕರಣವಾಗಿ ದಾಖಲಿಸಿಕೊಂಡು, ಎಲ್ಲಾ ಕೋನಗಳಿಂದ ತನಿಖೆ ಮುಂದುವರೆಸಿದ್ದಾರೆ.
ಇದನ್ನು ನೋಡಿ : ಕರ್ನಾಟಕ- ಕೇರಳ ಗಡಿಯಲ್ಲಿ ರಾಜೀವ್ ಗೌಡ ಬಂಧನ : ಪೌರಾಯುಕ್ತೆ ಅಮೃತಾಗೌಡಗೆ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಆರೆಸ್ಟ್




