Bhadravathi : ಸರ್ಕಾರಿ ಪ್ರಾಥಮಿಕ ಶಾಲೆಯ 10ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ Bhadravathi ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಊಟದ ಬಳಿಕ ನೀಡಲಾದ ಟಾನಿಕ್ ಸೇವನೆಯ ನಂತರ ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲ ಮಕ್ಕಳ ಸ್ಥಿತಿ ಗಂಭೀರ
ಅಸ್ವಸ್ಥರಾದ ಮಕ್ಕಳಲ್ಲಿ 6ನೇ ತರಗತಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೆಲ ಮಕ್ಕಳ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಶಾಲೆಯಲ್ಲಿ ಮಧ್ಯಾಹ್ನದ ಊಟದ ಬಳಿಕ ರಕ್ತದ ಅಭಿವೃದ್ಧಿಗಾಗಿ ಸರ್ಕಾರದ ಆದೇಶದಂತೆ ಎಫ್ಎಕ್ಸ್ ಟಾನಿಕ್ ನೀಡಲಾಗುತ್ತಿತ್ತು. ಈ ಟಾನಿಕ್ ಸೇವನೆಯ ನಂತರವೇ ಮಕ್ಕಳು ಅಸ್ವಸ್ತರಾಗಿದ್ದಾರೆ.
ಇದನ್ನು ಓದಿ : ಎರಡು ಬೈಕ್ ಗಳ ನಡುವೆ Accident – ಮೂವರಿಗೆ ಗಂಭೀರ ಗಾಯ

ಅಸ್ವಸ್ತ ಮಕ್ಕಳಿಗೆ ಚಿಕಿತ್ಸೆ ಮುಂದುವರೆಯುತ್ತಿದೆ
ಘಟನೆ ಬಗ್ಗೆ ಮಾಹಿತಿ ಪಡೆದ ಬಳಿಕ ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದೆ. ಇನ್ನು ಅಸ್ವಸ್ತ ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದೆ.
ಇದನ್ನು ನೋಡಿ : ರಾಜ್ಯಪಾಲರು ಮೋದಿಯ ಬಾಲದಂತೆ – KPCC ಪ್ರಧಾನ ಕಾರ್ಯದರ್ಶಿ ಆಕ್ರೋಶ




