ನಾಳೆ ಸಾರಿಗೆ ನೌಕರರಿಂದ Bengaluru Chalo – ಸರ್ಕಾರ ಸ್ಪಂದಿಸದಿದ್ರೆ ಸಾಮೂಹಿಕ ರಾಜೀನಾಮೆಗೆ ಪ್ಲಾನ್.

ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಬೇಡಿಕೆಗಳ ಈಡೇರಿಕೆಗೆ ಸಾರಿಗೆ ಸಂಘಟನೆಗಳು, ನಾಳೆ ಸರ್ಕಾರಕ್ಕೆ ಡೆಡ್ಲೈನ್ ನೀಡಿವೆ. ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದೇ ಇದ್ರೇ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರ ವಿಫಲ
KSRTC ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಸರ್ಕಾರದ ವಿರುದ್ಧ ಸಮರ ಸಾರಿದ್ದು, ವೇತನ ಪರಿಷ್ಕರಣೆ ಸೇರಿದಂತೆ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಸಾರಿಗೆ ನೌಕರರಿಂದ Bengaluru Chalo
ಈ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಾಳೆ Bengaluru Chalo ಗೆ ಕರೆ ನೀಡಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಾರಿಗೆ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಪ್ರತಿಭಟನೆ ನಡೆಯಲಿದೆ.

ಇದನ್ನು ನೋಡಿ : STING OPERATION| ಪ್ರಜಾಶಕ್ತಿ ಟಿವಿಯಲ್ಲಿ DONGI DOCTER ಕಳ್ಳಾಟ ಬಯಲು
ಎರಡು ಪ್ರಮುಖ ಬೇಡಿಕೆಗಳು
ಸಾರಿಗೆ ನೌಕರರು ಸರ್ಕಾರದ ಮುಂದೆ ಎರಡು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ.
- 2020ರ ಜನವರಿ 1ರಿಂದ 2023ರ ಫೆಬ್ರವರಿ 28ರವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಣ ಪಾವತಿ
- 2024ರಿಂದ ನಾಲ್ಕು ವರ್ಷಗಳ ಅವಧಿಗೆ ಹೊಸ ವೇತನ ಒಪ್ಪಂದ ಜಾರಿ
ಸಾಮೂಹಿಕ ರಾಜೀನಾಮೆಗೆ ಪ್ಲಾನ್
ನಾಳೆ ಸಂಜೆವರೆಗೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದರೆ, ನಾಡಿದ್ದು ಅಂದರೆ ಜನವರಿ 30ರಿಂದ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ.
ಉಪವಾಸ ಸತ್ಯಾಗ್ರಹಕ್ಕೂ ಕರೆ
ಇನ್ನೊಂದೆಡೆ, ಸಾರಿಗೆ ಸಂಘಟನೆಗಳ ಮತ್ತೊಂದು ಘಟಕವಾದ ಕೆಎಸ್ಆರ್ಟಿಸಿ ನೌಕರರ ಕೂಟವೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಶಿವರಾತ್ರಿ ನಂತರ ಫೆಬ್ರವರಿ 15ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದೆ.
ಸಾರಿಗೆ ಇಲಾಖೆಯಿಂದ ಎಚ್ಚರಿಕೆ
ಈ ನಡುವೆ ಸಾರಿಗೆ ಇಲಾಖೆ ಪ್ರತಿಭಟನಾ ನಿರತ ನೌಕರರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಮುಷ್ಕರ ಅಥವಾ ಮುಷ್ಕರಕ್ಕೆ ಬೆಂಬಲ ಸೂಚಿಸುವಂತಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದೆ. ಗುರುವಾರ ಡ್ಯೂಟಿಗೆ ಹಾಜರಾಗದ ನೌಕರರಿಗೆ ‘ನೋ ವರ್ಕ್, ನೋ ಪೇ’ ನಿಯಮ ಅನ್ವಯಿಸಲಾಗುವುದು ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ : ವಿಧವೆಯರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ




