ಬಾರಾಮತಿಯಲ್ಲಿ ವಿಮಾನ ಅಪಘಾತ; ರಾಜಕೀಯ ಜೀವನ ಶುರು ಮಾಡಿದ್ದ ನೆಲದಲ್ಲಿ ಮಹಾರಾಷ್ಟ್ರ ಡಿಸಿಎಂ Ajit Pawar ಕೊನೆಯುಸಿರು.

ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ತೆರಳುತ್ತಿದ್ದ ಖಾಸಗಿ ವಿಮಾನ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಡಿಸಿಎಂ Ajit Pawar ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ. ಅಜಿತ್ ಪವಾರ್ ಅವರೊಂದಿಗೆ ಅವರ ಭದ್ರತಾ ಸಿಬ್ಬಂದಿ ವಿಮಾನದಲ್ಲಿ ಇದ್ದರು ಡಿಜಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಕೊನೆಯುಸಿರು
ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆ ಇಂದು ಬಾರಾಮತಿ ಜಿಲ್ಲೆಯಲ್ಲಿ ನಡೆಯಲಿದ್ದ ಹಲವು ಸಾರ್ವಜನಿಕ ರ್ಯಾಲಿಗಳಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪಾಲ್ಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಭೀಕರ ಅವಘಡ ಸಂಭವಿಸಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ವಿಎಸ್ಆರ್ ಏವಿಯೇಷನ್ ನಿರ್ವಹಿಸುವ ವಿಟಿ-ಎಸ್ಎಸ್ಕೆ ಲಿಯರ್ಜೆಟ್ – 45 ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ ಐದು ಜನರಿದ್ದರು ಎಂದು ಅಧಿಕಾರಿ ದೃಢಪಡಿಸಿದರು.
ಇದನ್ನು ಓದಿ : ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ

ವಿಮಾನದಲ್ಲಿದ್ದ ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ
“ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ಇಬ್ಬರು ಸಿಬ್ಬಂದಿ ಮತ್ತಿಬ್ಬರು ಸಿಬ್ಬಂದಿ ಸದಸ್ಯರು ಇದ್ದರು. ಆರಂಭಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ” ಎನ್ನಲಾಗಿದೆ.

ಇದನ್ನು ನೋಡಿ : ಮದ್ವೆ ಆಗಿದ್ರು ಆಕೆಗೆ ಅವನೇ ಬೇಕಂತೆ- ಎರಡೇ ತಿಂಗಳಿಗೆ ಎಸ್ಕೇಪ್ ಆದ್ಳು ಹೆಂಡ್ತಿ..!




