ಮಹಾರಾಷ್ಟ್ರದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ DCM Ajit Pawar ನಿಧನರಾಗಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಅಪಘಾತದ ಸಂಪೂರ್ಣ ವಿವರಗಳು ಇಲ್ಲಿವೆ.

ಮಹಾರಾಷ್ಟ್ರದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ DCM Ajit Pawarನಿಧನರಾಗಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ ಸಂದೇಶ
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು,
“ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ದುರಂತ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನವು ಸಾರ್ವಜನಿಕ ಜೀವನಕ್ಕೆ ಅಪಾರ ನಷ್ಟವಾಗಿದೆ. ಅವರ ಕುಟುಂಬ, ಸಹೋದ್ಯೋಗಿಗಳು ಹಾಗೂ ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ಬಳಿ ಈ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಮುಂಬೈನಿಂದ ತಮ್ಮ ಸ್ವಕ್ಷೇತ್ರ ಬಾರಾಮತಿಗೆ ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದರು.
ವಿಮಾನವು ರನ್ವೇಯಲ್ಲಿ ಇಳಿಯುವ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಲ್ಯಾಂಡಿಂಗ್ಗೆ ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಪಕ್ಕಕ್ಕೆ ಸರಿದು ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
ಇದನ್ನು ಓದಿ : ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ

ಅಪಘಾತದಲ್ಲಿ ಮೃತಪಟ್ಟವರು
ಈ ದುರಂತದಲ್ಲಿ,
- ಡಿಸಿಎಂ ಅಜಿತ್ ಪವಾರ್
- ಒಬ್ಬ ಭದ್ರತಾ ಅಧಿಕಾರಿ
- ಒಬ್ಬ ಸಹಾಯಕ
- ಇಬ್ಬರು ಪೈಲಟ್ಗಳು
- ಒಬ್ಬ ಕ್ಯಾಬಿನ್ ಕ್ರ್ಯೂ ಸಿಬ್ಬಂದಿ
ಒಟ್ಟಾರೆ ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ಅಪಘಾತದ ಸ್ಥಳದಲ್ಲಿ ರಕ್ಷಣಾ ಹಾಗೂ ಶೋಧನಾ ಕಾರ್ಯಾಚರಣೆಗಳು ಮುಂದುವರಿದಿವೆ. ವಿಮಾನವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ.
ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ನಾಯಕನಾಗಿದ್ದ ಅಜಿತ್ ಪವಾರ್ ಅವರ ಅಕಾಲಿಕ ನಿಧನವು ರಾಜ್ಯ ರಾಜಕೀಯಕ್ಕೆ ಮಾತ್ರವಲ್ಲ, ದೇಶದ ಸಾರ್ವಜನಿಕ ಜೀವನಕ್ಕೂ ಅಪಾರ ನಷ್ಟವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಇದನ್ನು ನೋಡಿ : ಮದ್ವೆ ಆಗಿದ್ರು ಆಕೆಗೆ ಅವನೇ ಬೇಕಂತೆ- ಎರಡೇ ತಿಂಗಳಿಗೆ ಎಸ್ಕೇಪ್ ಆದ್ಳು ಹೆಂಡ್ತಿ..!




