Shivamogga ದಲ್ಲಿ Bus ಗೆ ಬೆಂಕಿ ತಗುಲಿ 36 ಜನರಿಗೆ ಗಾಯ..!! ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಹೊಸನಗರದ ಅರಸಾಳು ಬಳಿ ಬೆಂಕಿ ತಗುಲಿ 36 ಪ್ರಯಾಣಿಕರಿಗೆ ಗಾಯಗಳಾಗಿವೆ.

Shivamogga : ಇತ್ತೀಚೆಗೆ ಚಿತ್ರದುರ್ಗದಲ್ಲಿ ಖಾಸಗಿ ಬಸ್ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಜನರ ಮನಸ್ಸಿನಲ್ಲಿ ಆತಂಕ ಮೂಡಿಸಿದ್ದೇ ಇತ್ತು.
ಈ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದೊಡ್ಡ ಬಸ್ ದುರಂತ ತಪ್ಪಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಸ್ನಲ್ಲಿದ್ದ 36 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಈ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು, ಅರಸಾಳು ಗ್ರಾಮದ ಸಮೀಪದ 9ನೇ ಮೈಲಿಗಲ್ಲು ಬಳಿ ಸಂಭವಿಸಿದೆ.
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 36 ಜನರಿಗೆ ಈ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯಲ್ಲಿ ಗಾಯಗೊಂಡವರಲ್ಲಿ 12 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರನ್ನು ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಬಸ್ನಲ್ಲಿ ಹೊಗೆ ಕಾಣಿಸಿಕೊಂಡ ಕ್ಷಣವೇ ಆತಂಕ
ಹೊಸನಗರ ಹಾಗೂ ರಿಪ್ಪನ್ಪೇಟೆ ಭಾಗದಲ್ಲಿ ಪ್ರಯಾಣಿಕರನ್ನು ಪಿಕ್ಅಪ್ ಮಾಡಿಕೊಂಡು ಬಸ್ ಅರಸಾಳು ಗ್ರಾಮ ದಾಟಿ 9ನೇ ಮೈಲಿಗಲ್ಲು ಬಳಿ ಬರುತ್ತಿದ್ದಂತೆ ಬಸ್ನೊಳಗೆ ಹೊಗೆ ಕಾಣಿಸಿಕೊಂಡಿದೆ.
ಕ್ಷಣಾರ್ಧದಲ್ಲಿ ಬಸ್ಗೆ ಬೆಂಕಿ ತಗುಲಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ಗಾಬರಿಗೊಂಡ ಚಾಲಕ ತಕ್ಷಣ ಬಸ್ ಅನ್ನು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ನಿಲ್ಲಿಸಿದ್ದಾನೆ. ಬಸ್ ಪ್ರಯಾಣ ಆರಂಭಿಸಿ ಕೇವಲ 30 ನಿಮಿಷಗಳಷ್ಟೇ ಆಗಿದ್ದರಿಂದ, ಪ್ರಯಾಣಿಕರು ಇನ್ನೂ ನಿದ್ದೆಗೆ ಜಾರಿರಲಿಲ್ಲ.
ಹೀಗಾಗಿ ಬೆಂಕಿ ಕಾಣುತ್ತಿದ್ದಂತೆಯೇ ಎಲ್ಲರೂ ತಕ್ಷಣ ಬಸ್ನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ದಳ ಮತ್ತು ಪೊಲೀಸರ ಕಾರ್ಯಾಚರಣೆ
ಘಟನಾ ಸ್ಥಳಕ್ಕೆ ರಿಪ್ಪನ್ಪೇಟೆ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಬೆಂಕಿ ಹೇಗೆ ತಗುಲಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ತಿಳಿಸಿದ್ದಾರೆ.




