ರಾಜ್ಯದಲ್ಲಿ Heart Attack ನಿಂದ ಎಳೆಯ ಪ್ರಾಯದವರ ಸಾವಿನ ಪ್ರಮಾಣ ಮುಂದುವರಿದಿದೆ.

ರಾಜ್ಯದಲ್ಲಿ ಯುವಜನತೆಯಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಹೃದಯಾಘಾತಕ್ಕೆ ಯುವಕಿ ಬಲಿ
ಮೃತ ವಿದ್ಯಾರ್ಥಿನಿಯನ್ನು ಕಾವ್ಯಾ ಚಲವಾದಿ (18) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾವ್ಯಾ, ಮಂಗಳವಾರ ಸಂಜೆ Heart Attack ನಿಂದ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : IPL RAPP ಲಿಸ್ಟ್ ಪ್ರಕಟ – 1,307 ಆಟಗಾರರಿಗೆ ಸ್ಥಾನ

ಯುವ ವಯಸ್ಸಿನಲ್ಲಿ ಹೆಚ್ಚುತ್ತಿರುವ Heart Attack ಸಾವುಗಳು
ರಾಜ್ಯದಲ್ಲಿ ಎಳೆಯ ಪ್ರಾಯದವರಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣಗಳು ಮುಂದುವರಿದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಒಂದು ತಿಂಗಳ ಹಿಂದಷ್ಟೇ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ 22 ವರ್ಷದ ಬಿಕಾಂ ವಿದ್ಯಾರ್ಥಿನಿ ದಿಶಾ ಹೃದಯಾಘಾತದಿಂದ ಮೃತಪಟ್ಟಿದ್ದಳು. ಇದಕ್ಕೂ ಮುನ್ನ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ (12) ಶಾಲೆಗೆ ತೆರಳುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿತ್ತು.
ತಜ್ಞರ ಸಮಿತಿ ವರದಿ ಏನು ಹೇಳಿದೆ?
ಸಣ್ಣ ವಯಸ್ಸಿನವರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸಾವುಗಳ ಹಿನ್ನೆಲೆ ರಾಜ್ಯ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿತ್ತು. ಸಮಿತಿ ಸಲ್ಲಿಸಿದ ವರದಿಯಲ್ಲಿ, ಕೋವಿಡ್ ವ್ಯಾಕ್ಸೀನ್ಗೆ ಈ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಬದಲಾಗಿ ಜೀವನಶೈಲಿ ಬದಲಾವಣೆಗಳು, ಆಹಾರ ಪದ್ಧತಿ, ಮಾನಸಿಕ ಒತ್ತಡ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವರದಿ ತಿಳಿಸಿದೆ.

ಇದನ್ನು ನೋಡಿ : HAVERI | ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಮೂವರು ಸವಾರರಿಗೆ ಗಂಭೀರ ಗಾಯ




