Sira ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗ್ತಿದೆ ಮದ್ಯ ಮಾರಾಟ..!?

ಇತ್ತೀಚಿನ ದಿನಗಳಲ್ಲಿ ಅದ್ಯಾಕೋ ಶಿರಾದಲ್ಲಿ ಅಕ್ರಮ ಮದ್ಯ ಮಾರಾಟ ದಿನೇ ದಿನೇ ಹೆಚ್ಚಾಗುತ್ತಿದೆ ಅನ್ನೋ ಗಂಭೀರ ಆರೋಪ ಕೇಳಿ ಬರ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ಗ್ರಾಮೀಣ ಭಾಗದಲ್ಲಿ ಅನಧಿಕೃತ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿಯೇ ನಡೆಯುತ್ತಿದೆ. ಕೆಲವರು ಲಾಭಕ್ಕಾಗಿ ಯುವಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಅನ್ನೋ ಮಾತುಗಳು ಕೂಡ ಕೇಳಿ ಬರುತ್ತಿವೆ. ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಯುವಕರೇ ಈ ಎಣ್ಣೆಗೆ ದಾಸರಾಗುತ್ತಿದ್ದಾರೆ.
Sira ದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ
ಹೌದು.. Sira ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕೆಲವು ವ್ಯಕ್ತಿಗಳು ಸ್ವಯಃ ಲಾಭಕ್ಕಾಗಿ ಅನಧಿಕೃತ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತವೆ. ಇಂತಹ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕಿರುವ ಅಧಿಕಾರಿಗಳು ಸೈಲೆಂಟಾಗಿದ್ದಾರೆ ಅಂತ ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ರೆ. ಅತ್ತ ಕಾನೂನು ಉಲ್ಲಂಘಿಸುವವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಅಂತ ಜನ ಕಿಡಿಕಾರುತ್ತಿದ್ದಾರೆ.

ಇದನ್ನು ಓದಿ : PUC ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ಕುಡಿತಕ್ಕೆ ದಾಸರಾಗಿ ಅನಾರೋಗ್ಯಕ್ಕೆ ತುತ್ತು
ಇದಕ್ಕೆ ಉದಾಹರಣೆಗೆ ಒಂದಕ್ಕೊಂದು ತಾಲ್ಲೂಕಿನ ಗೌಡಗೆರೆ ಹೋಬಳಿ ಮದ್ದಕ್ಕನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಅತಿಹೆಚ್ಚು ಯುವಕರು ಮದ್ಯವ್ಯಸನಿ ಗಳಾಗುತ್ತಿದ್ದಾರೆ.
ಹದಿಹರೆಯದ ವಯಸ್ಸಿನಲ್ಲಿಯೇ ಕುಡಿತಕ್ಕೆ ದಾಸರಾಗಿ ಅನಾರೋಗ್ಯಕ್ಕೆ ತುತ್ತಾಗಿ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಕುರಿತಾಗಿ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ಈ ಅಕ್ರಮ ಮದ್ಯ ಮಾರಾಟ ಜಾಲಕ್ಕೆ ಕಡಿವಾಣ ಹಾಕುವಂತೆ ಮನವಿ ಕೊಟ್ಟಿದ್ರು. ಅದ್ಯಾಕೋ ಅಧಿಕಾರಿಗಳು ಕ್ಯಾರೆ ಎನ್ನುತ್ತಿದ್ದಾರಂತೆ.
ಅಧಿಕಾರಿಗಳಿಗೆ ದೂರು
ಇತ್ತ ಈ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಹಿಳೆಯರು, ಮಹಿಳಾ ಸಂಘಗಳು, ಸಾರ್ವಜನಿಕರು ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಜೊತೆಗೆ ಅನಧಿಕ ಮಾರಾಟದ ಸ್ಥಳಗಳ ಕುರಿತಾಗಿಯೂ ತಿಳಿಸಿದ್ದಾರಂತೆ.
ಆದ್ರೂ ಅಬಕಾರಿ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲವಂತೆ. ಹೀಗಾಗಿ ಅಧಿಕಾರಿಗಳು ಈ ಅಕ್ರಮ ಮದ್ಯ ಮಾರಾಟಕ್ಕೆ ಕೈಜೋಡಿಸಿರಬೇಕು ಎಂದು ಆರೋಪಿಸುತ್ತಿದ್ದಾರೆ.

ಯುವಕರೇ ಟಾರ್ಗೆಟ್..!?
ಕೂಡಲೇ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ, ಅಕ್ರಮ ಸ್ಥಳಗಳಲ್ಲಿ ಅನಧಿಕೃತವಾಗಿ ತಲೆಎತ್ತಿರುವ ಅಂಗಡಿಗಳಿಗೆ ಕಡಿವಾಣ ಹಾಕಬೇಕಿದೆ.
ಇದನ್ನು ನೋಡಿ : ಯೋಜನೆಗಳ ಹೆಸರಲ್ಲಿ ಹಣ ಡ್ರಾ ಆರೋಪ – ಅನುದಾನಕ್ಕೆ ಕೈ ಹಾಕಿದ್ರಾ ಅಧಿಕಾರಿಗಳು




