Shivamogga ತೀರ್ಥಹಳ್ಳಿ ಬಳಿ 29 ವರ್ಷದ ಕಿಶೋರ್ KFD (ಮಂಗನ ಕಾಯಿಲೆ) ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Shivamogga ಜಿಲ್ಲೆಯಲ್ಲಿ ಕ್ಯಾಸನೂರು ಅರಣ್ಯ ರೋಗ (KFD / ಮಂಗನ ಕಾಯಿಲೆ) ಮತ್ತೊಂದು ಜೀವವನ್ನು ಕಸಿದುಕೊಂಡಿದೆ. ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದ ಕಿಶೋರ್ (29) ಎಂಬ ಯುವಕ ಕೆಎಫ್ಡಿ ಕಾಯಿಲೆಗೆ ಬಲಿಯಾಗಿದ್ದಾನೆ.
ಕಿಶೋರ್ ಕಳೆದ ಕೆಲವು ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದು, ಪ್ರಥಮವಾಗಿ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.
ಜನವರಿ 22ರಂದು KFD ಪಾಸಿಟಿವ್ ವರದಿ
ಜನವರಿ 21ರಂದು ಕಿಶೋರ್ಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಜನವರಿ 22ರಂದು KFD ಪಾಸಿಟಿವ್ ವರದಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನು ಓದಿ : ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ

ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು
ಆದರೆ, ಮಣಿಪಾಲ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆಯೂ ಫಲಕಾರಿಯಾಗದೆ ಬುಧವಾರ ಬೆಳಗಿನಜಾವ ಕಿಶೋರ್ ಸಾವನ್ನಪ್ಪಿದ್ದಾರೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬ ಹಾಗೂ ಗ್ರಾಮಸ್ಥರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮೃತ ಕಿಶೋರ್ನ ಕಟ್ಟೆಹಕ್ಲು ಗ್ರಾಮದಲ್ಲಿ ಇದುವರೆಗೂ ಯಾರಲ್ಲೂ ಕೆಎಫ್ಡಿ ಲಕ್ಷಣಗಳು ಅಥವಾ ಜ್ವರ ಕಂಡುಬಂದಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆದರೆ ಕಿಶೋರ್ಗೆ ಹೇಗೆ ಸೋಂಕು ತಗುಲಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನೆ ಬಳಿಕ ಆರೋಗ್ಯ ಇಲಾಖೆ ಗ್ರಾಮದಲ್ಲಿ ನಿಗಾ ವಹಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅರಣ್ಯ ಪ್ರದೇಶಗಳಿಗೆ ತೆರಳುವವರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಇದನ್ನು ನೋಡಿ : ಮದ್ವೆ ಆಗಿದ್ರು ಆಕೆಗೆ ಅವನೇ ಬೇಕಂತೆ- ಎರಡೇ ತಿಂಗಳಿಗೆ ಎಸ್ಕೇಪ್ ಆದ್ಳು ಹೆಂಡ್ತಿ..!




