ವೇತನ ಹಿಂಬಾಕಿ ಹಾಗೂ ಪರಿಷ್ಕರಣೆಗೆ ಆಗ್ರಹಿಸಿ KSRTC ನೌಕರರು ಜನವರಿ 29ರಂದು ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ.

KSRTC : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ವೇತನ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳದ ಹಿನ್ನೆಲೆ, ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಜನವರಿ 29ರಂದು ‘ಬೆಂಗಳೂರು ಚಲೋ’ಗೆ ಕರೆ ನೀಡಲಾಗಿದೆ.
ಫ್ರೀಡಂ ಪಾರ್ಕ್ನಲ್ಲಿ ಭಾರಿ ಪ್ರತಿಭಟನೆ
ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ, ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ನೌಕರರು ಸೇರಿ ಪ್ರತಿಭಟನೆ ನಡೆಸಲಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳನ್ನು ನಾಳೆ ಸಂಜೆ 4 ಗಂಟೆಯೊಳಗೆ ಈಡೇರಿಸದಿದ್ದರೆ, ಸುದ್ದಿಗೋಷ್ಟಿ ನಡೆಸಿ ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡುವ ಯೋಜನೆ ಮಾಡಲಾಗಿದೆ. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನೂ ಮುಖಂಡರು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮುಖ್ಯ ಬೇಡಿಕೆಗಳು ಯಾವುವು?
ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳು ಹೀಗಿವೆ .01-01-2020ರಿಂದ 28-02-2023ರವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಪಾವತಿ. 01-01-2024ರಿಂದ ಮುಂದಿನ ನಾಲ್ಕು ವರ್ಷಗಳ ಹೊಸ ವೇತನ ಒಪ್ಪಂದ̧ ಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಂಟಿ ಕ್ರಿಯಾ ಸಮಿತಿಯು ‘ಬೆಂಗಳೂರು ಚಲೋ’ಗೆ ಕರೆ ನೀಡಿದೆ.

KSRTCಯಿಂದ ‘ನೋ ವರ್ಕ್ ನೋ ಪೇ’ ಎಚ್ಚರಿಕೆ
ಮತ್ತೊಂದೆಡೆ, ಸಾರಿಗೆ ನೌಕರರ ಪ್ರತಿಭಟನೆಗೆ ಬ್ರೇಕ್ ಹಾಕಲು KSRTC ಎಂಡಿ ಅಕ್ರಂ ಪಾಷ ಖಡಕ್ ಆದೇಶ ಹೊರಡಿಸಿದ್ದಾರೆ.
- ಪ್ರತಿಭಟನೆ ಅಥವಾ ಮುಷ್ಕರಕ್ಕೆ ಬೆಂಬಲ ನೀಡುವಂತಿಲ್ಲ
- ಗುರುವಾರ ಡ್ಯೂಟಿಗೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಜಾರಿಗೆ ಬರಲಿದೆ
ಎಂದು ಎಚ್ಚರಿಕೆ ನೀಡಲಾಗಿದೆ.

ಬಸ್ ಸಂಚಾರಕ್ಕೆ ಅಡ್ಡಿಯಾಗದಂತೆ ಸೂಚನೆ
ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ: ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು̧ ಅನಿವಾರ್ಯ ಸಂದರ್ಭ ಹೊರತುಪಡಿಸಿ ಯಾವುದೇ ರಜೆ ಮಂಜೂರು ಮಾಡಬಾರದು ಎಂದು ಅಧಿಕಾರಿಗಳಿಗೆ ಎಂಡಿ ಖಡಕ್ ಸೂಚನೆ ನೀಡಿದ್ದಾರೆ. ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.




