ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಪೊಲೀಸರು Rajeev Gowda ಬಂಧಿಸಿದ್ದರು.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಪಟ್ಟಣದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ರಾಜೀವ್ಗೌಡನನ್ನು ಹೆಚ್ಚಿನ ವಿಚಾರಣೆಗಾಗಿ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಇದನ್ನು ಓದಿ : ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ಪಿಜಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು Suicide
14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ
ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದ ಆರೋಪದಡಿ ರಾಜೀವ್ ಗೌಡನನ್ನು ಪೊಲೀಸರು ಕೇರಳ ಗಡಿಯಲ್ಲಿ ಬಂಧಿಸಿದ್ದರು. ಬಳಿಕ ಅವರನ್ನು ಶಿಡ್ಲಘಟ್ಟ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನಿನ್ನೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.
2 ದಿನ ಪೊಲೀಸ್ ಕಸ್ಟಡಿಗೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಸಂಗ್ರಹಿಸುವ ಅಗತ್ಯವಿದೆ ಎಂದು ಪೊಲೀಸರು ಇಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿ Rajeev Gowda ನನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ.

ಇದನ್ನು ನೋಡಿ : ರೂಲ್ ಬುಕ್ ಹರಿದು ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ




