Haveri ಜಿಲ್ಲೆಯ ಬಸಾಪುರ ಗ್ರಾಮ ಬಳಿ ಸಾರಿಗೆ ಬಸ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

Haveri ಜಿಲ್ಲೆಯ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯಗಳಾಗಿವೆ.
ಹಾವನೂರು ಜಾತ್ರೆಗೆ ತೆರಳುತ್ತಿದ್ದಾಗ ದುರ್ಘಟನೆ
ಹಳೇರಿತ್ತಿ ಗ್ರಾಮದಿಂದ ಹಾವನೂರು ಜಾತ್ರೆಗೆಂದು ಜನರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್, ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಟ್ರ್ಯಾಕ್ಟರ್ನಲ್ಲಿ ಮಹಿಳೆಯರು, ಮಕ್ಕಳು ಸೇರಿ ಹಲವರು ಪ್ರಯಾಣಿಸುತ್ತಿದ್ದರು.
ಅಪಘಾತದ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ಸಣ್ಣಪುಟ್ಟ ಮಕ್ಕಳಿಗೂ ಗಂಭೀರ ಗಾಯಗಳಾಗಿವೆ. ಮಕ್ಕಳನ್ನು ಗಾಯಗೊಂಡ ಸ್ಥಿತಿಯಲ್ಲಿ ಕಂಡ ಪೋಷಕರ ಆಕ್ರಂದನ ಸ್ಥಳದಲ್ಲಿ ಮನಕಲಕುವ ದೃಶ್ಯವನ್ನು ಸೃಷ್ಟಿಸಿದೆ.
ಇದನ್ನು ಓದಿ : ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ಪಿಜಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು Suicide

ಅಪಘಾತದಲ್ಲಿ ಗಾಯಗೊಂಡ ಎಲ್ಲರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ನಿಗಾ ಮುಂದುವರಿದಿದೆ.
ಸ್ಥಳಕ್ಕೆ ಅಧಿಕಾರಿಗಳ ಭೇಟಿ
ಘಟನೆಯ ಮಾಹಿತಿ ತಿಳಿದ ತಕ್ಷಣವೇ ಹಾವೇರಿ ತಹಸೀಲ್ದಾರ್ ಶರಣಮ್ಮ ಹಾಗೂ ಗುತ್ತಲ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ..
ಇದನ್ನು ನೋಡಿ : ರೂಲ್ ಬುಕ್ ಹರಿದು ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ




