ಒಂದೇ ಮಹಿಳೆಯೊಂದಿಗೆ ಅನೈತಿಕ ಸಂಬಂಧ Hassan ದಲ್ಲಿ ಅಡುಗೆ ಗುತ್ತಿಗೆದಾರನ ಬರ್ಬರ ಕೊಲೆ..!!

ರಾಜ್ಯದಲ್ಲಿ ಅನೈತಿಕ ಸಂಬಂಧಗಳ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಇದರಿಂದ ಭೀಕರ ಅಪರಾಧಗಳಿಗೂ ಕಾರಣವಾಗುತ್ತಿದೆ. ಇದೇ ರೀತಿಯ ಮತ್ತೊಂದು ಘಟನೆ Hassan ನಗರದಲ್ಲಿ ನಡೆದಿದ್ದು, ಒಂದೇ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ ಅಡುಗೆ ಗುತ್ತಿಗೆದಾರನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ಜನವರಿ 28ರ ತಡರಾತ್ರಿ ಈ ದುರ್ಘಟನೆ ನಡೆದಿದೆ. ಅಡುಗೆ ಗುತ್ತಿಗೆದಾರ ಆನಂದ್ (48) ಎಂಬುವವರನ್ನು ಧರ್ಮೇಂದ್ರ ಎಂಬ ವ್ಯಕ್ತಿ ಚಾಕುವಿನಿಂದ ಐದಾರು ಬಾರಿ ಇರಿದು ಕೊಲೆ ಮಾಡಿದ್ದಾನೆ. ಒಂದೇ ಮಹಿಳೆಯೊಂದಿಗೆ ಆನಂದ್ ಹಾಗೂ ಧರ್ಮೇಂದ್ರ ಇಬ್ಬರೂ ಅನೈತಿಕ ಸಂಬಂಧ ಹೊಂದಿದ್ದುದೇ ಈ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಇದನ್ನು ಓದಿ : ಸ್ಯಾಂಡಲ್ವುಡ್ ನಟ Mayur Patel ವಿರುದ್ಧ FIR – ಆಗಿದ್ದೇನು..?
ಬಾರ್ನಲ್ಲಿ ಆರಂಭವಾದ ಜಗಳ, ಕೊಲೆಯಲ್ಲಿ ಅಂತ್ಯ
ಮಾಹಿತಿಯಂತೆ, ಆನಂದ್ ಮತ್ತು ಧರ್ಮೇಂದ್ರ ಇಬ್ಬರೂ ಬಾರ್ನಲ್ಲಿ ಭೇಟಿಯಾಗಿ ಮಹಿಳೆಯೊಂದಿಗಿನ ಸಂಬಂಧದ ಬಗ್ಗೆ ಮಾತುಕತೆ ನಡೆಸಿದ್ದರು. ಅಲ್ಲಿಂದ ಆನಂದ್ ಮನೆಗೆ ತೆರಳಿದ್ದರೂ, ನಂತರ ಧರ್ಮೇಂದ್ರ ಫೋನ್ ಮಾಡಿ ಕರೆಸಿಕೊಂಡಿದ್ದಾನೆ. ಈ ವೇಳೆ ಮತ್ತೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಮಾತಿನ ಭರದಲ್ಲಿ ಧರ್ಮೇಂದ್ರ ಚಾಕುವಿನಿಂದ ದಾಳಿ ನಡೆಸಿದ್ದಾನೆ.
ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವು
ಧರ್ಮೇಂದ್ರ ನಡೆಸಿದ ಚಾಕು ದಾಳಿಯಿಂದ ಆನಂದ್ ತೀವ್ರ ರಕ್ತಸ್ರಾವಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ಯೆಯ ನಂತರ ಆರೋಪಿ ಧರ್ಮೇಂದ್ರ ಪರಾರಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನು ನೋಡಿ : ವಿಧಾನಸಭೆಯಲ್ಲಿ ಪಡಿತರ ಅಕ್ಕಿ ಗದ್ದಲ ಮುನಿಯಪ್ಪ – ಮಹೇಶ್ ಫುಲ್ ಫೈಟ್




