ಬಾರಾಮತಿಯಲ್ಲಿ Ajit Pawar ಅಂತ್ಯಕ್ರಿಯೆಗೆ ಮಕ್ಕಳಿಂದ ಅಗ್ನಿಸ್ಪರ್ಶ, ಕುಟುಂಬದ ಆಕ್ರಂದನ..!!!

ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಉಪಮುಖ್ಯಮಂತ್ರಿ Ajit Pawar ಅವರ ಅಂತ್ಯಕ್ರಿಯೆ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕುಟುಂಬದ ಸದಸ್ಯರು, ರಾಜಕೀಯ ನಾಯಕರು ಹಾಗೂ ಸಾವಿರಾರು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ಮಕ್ಕಳಿಂದ ಅಗ್ನಿಸ್ಪರ್ಶ, ಕುಟುಂಬದ ಆಕ್ರಂದನ
ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ಪುತ್ರರಾದ ಪಾರ್ಥ ಮತ್ತು ಜಯ್ ಅಗ್ನಿಸ್ಪರ್ಶ ಮಾಡಿದರು. ಅಂತ್ಯಸಂಸ್ಕಾರದ ವೇಳೆ ಪತ್ನಿ ಸುನೇತ್ರಾ ಪವಾರ್ ಕಣ್ಣೀರಿಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಇದನ್ನು ಓದಿ : ಸ್ಯಾಂಡಲ್ವುಡ್ ನಟ Mayur Patel ವಿರುದ್ಧ FIR – ಆಗಿದ್ದೇನು..?

ಗಣ್ಯರ ಉಪಸ್ಥಿತಿ
ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ರಾಜಕೀಯ ಹಾಗೂ ಸಾಮಾಜಿಕ ಗಣ್ಯರು ಭಾಗವಹಿಸಿದ್ದರು. ಅವರು ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಅಂತ್ಯಕ್ರಿಯೆಗೆ ಮುನ್ನ ಬೆಳಿಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಕ್ಯಾಂಪಸ್ (ಗಡಿಮಾ) ನಿಂದ ಪಾರ್ಥಿವ ಶರೀರದ ಮೆರವಣಿ ನಡೆಯಿತು. ಈ ವೇಳೆ ಸಾವಿರಾರು ಅಭಿಮಾನಿಗಳು ತಮ್ಮ ಪ್ರೀತಿಯ ‘ದಾದಾ’ಗೆ ಗೌರವ ನಮನ ಸಲ್ಲಿಸಿದರು.

ವಿಮಾನ ಅಪಘಾತದ ವಿವರ
ಜನವರಿ 28ರಂದು ಬಾರಾಮತಿಯಲ್ಲಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಚಾರ್ಟರ್ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿತ್ತು. ಈ ದುರ್ಘಟನೆಯಲ್ಲಿ ಅಜಿತ್ ಪವಾರ್ ಸೇರಿದಂತೆ ಭದ್ರತಾ ಸಿಬ್ಬಂದಿ ವಿದೀಪ್ ಜಾಧವ್, ಫ್ಲೈಟ್ ಅಟೆಂಡೆಂಟ್ ಪಿಂಕಿ ಮಾಲಿ, ಪೈಲಟ್-ಇನ್-ಕಮಾಂಡ್ ಸುಮಿತ್ ಕಪೂರ್, ಸೆಕೆಂಡ್-ಇನ್-ಕಮಾಂಡ್ ಶಾಂಭವಿ ಪಾಠಕ್ ಮೃತಪಟ್ಟಿದ್ದಾರೆ.
ಅಜಿತ್ ಪವಾರ್ ಅವರ ಅಕಾಲಿಕ ನಿಧನದಿಂದ ಮಹಾರಾಷ್ಟ್ರ ಸೇರಿದಂತೆ ದೇಶದ ರಾಜಕೀಯ ವಲಯದಲ್ಲಿ ತೀವ್ರ ಶೋಕ ಆವರಿಸಿದೆ. ಸಾರ್ವಜನಿಕರು ಹಾಗೂ ನಾಯಕರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.
ಇದನ್ನು ನೋಡಿ : ವಿಧಾನಸಭೆಯಲ್ಲಿ ಪಡಿತರ ಅಕ್ಕಿ ಗದ್ದಲ ಮುನಿಯಪ್ಪ – ಮಹೇಶ್ ಫುಲ್ ಫೈಟ್




