ಎನ್ಎಚ್–66ರ ಮಾನೀರು ದೇವಸ್ಥಾನದ ಬಳಿ KSRTC ಬಸ್ ಮತ್ತು ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾಗಿ ಎಂಟು ಮಂದಿ ಗಾಯ..

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಮಾನೀರು ದೇವಸ್ಥಾನದ ಬಳಿ KSRTC ಬಸ್ ಮತ್ತು ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಚಾಲಕ ಗಂಭೀರ, ಒಟ್ಟು ಎಂಟು ಮಂದಿ ಗಾಯ
ಅಪಘಾತದಲ್ಲಿ ಬೊಲೆರೋ ವಾಹನ ಚಾಲಕ ಹಾಗೂ ಬಸ್ನಲ್ಲಿದ್ದ ಏಳು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೊಲೆರೋ ಚಾಲಕ ಕಾರವಾರದ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನು ಓದಿ : ರಾಜಕಾರಣಿಗಳ ಮಗಳಂದಿರ ಜತೆ ಯುವಕನ ಕಾಮಕೇಳಿ – ವಿಡಿಯೋ Viral

ಮಾಹಿತಿಯಂತೆ, ಕಾರವಾರದಿಂದ ಕುಮಟಾಕ್ಕೆ ಮೀನು ತುಂಬಿಕೊಂಡು ತೆರಳುತ್ತಿದ್ದ ಬೊಲೆರೋ ವಾಹನ, ಕುಮಟಾದಿಂದ ಕಾರವಾರದ ಕಡೆಗೆ ಮರಳುತ್ತಿದ್ದ ವೇಳೆ ಗೋಕರ್ಣದ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಘಟನೆಯ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ತಿಳಿಯಲು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನು ನೋಡಿ : ಅಧಿವೇಶನದಲ್ಲಿ ರೂಲ್ ಬುಕ್ ಹರಿದ ವಿಚಾರ ಸದನದಲ್ಲಿ ಬಿ.ಕೆ.ಹರಿಪ್ರಸಾದ್ ಕೆಂಡಾಮಂಡಲ




