Bengaluru : ಪೊಲೀಸ್ ಇಲಾಖೆಯಲ್ಲಿ ಹಗಲು ರಾತ್ರಿ ಎನ್ನದೆ, ಹಬ್ಬ ಹರಿದಿನಗಳನ್ನ ಬಿಟ್ಟು ಜನರಿಗಾಗಿ ಪ್ರತಿನಿತ್ಯ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಪೊಲೀಸ್ ಇಲಾಖೆ ಭರ್ಜರಿ ಗಿಫ್ಟ್ ನೀಡಿದೆ.

Bengaluru : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ದಿನದ 24 ಗಂಟೆಯೂ ಜನರಿಗಾಗಿ ದುಡಿಯುವ ನಮ್ಮ ಪೊಲೀಸರಿಗೆ ಮನೆಯವರ ಜೊತೆ ಸಂಭ್ರಮಿಸಲು ಸಮಯವೇ ಇರುವುದಿಲ್ಲ. ಹೀಗಾಗಿ ಗೃಹ ಇಲಾಖೆ ಸಾಂದರ್ಭಿಕ ರಜೆ ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸರಿಗೆ ಭರ್ಜರಿ ಗಿಫ್ಟ್
ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ಜೀವನ ಹಾಗೂ ಕೆಲಸದ ಒತ್ತಡದ ಕಡಿಮೆ ಮಾಡಲು ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಕೈಗೊಂಡಿದ್ದಾರೆ. ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ (Birthday) ಹಾಗೂ ವಿವಾಹ ವಾರ್ಷಿಕೋತ್ಸವ (Wedding Anniversary) ದಿನದಂದು ಸಾಂದರ್ಭಿಕ ರಜೆ ನೀಡುವಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕುಟುಂಬಸ್ಥರ ಜತೆ ಕಾಲ ಕಳೆಯಲು ರಜೆ ಭಾಗ್ಯ
ಪೊಲೀಸ್ ಇಲಾಖೆಯಲ್ಲಿರುವ ಸಿಬ್ಬಂದಿಗೆ ತಮ್ಮ ವಿಶೇಷ ದಿನಗಳನ್ನು ಕುಟುಂಬದವರ ಜೊತೆ ಆಚರಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ನಿರಂತರ ಒತ್ತಡದ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಈ ರಜೆ ಮಾನಸಿಕ ಒತ್ತಡ ಕಡಿಮೆ ಮಾಡಲಿದ್ದು, ವೈಯಕ್ತಿಕ ಜೀವನ ಹಾಗೂ ವೃತ್ತಿ ಜೀವನದ ಸಮತೋಲನಕ್ಕೆ ಸಹಾಯಕವಾಗಲಿದೆ.
ಇದನ್ನೂ ಓದಿ : Apex Bank ಅಧ್ಯಕ್ಷ ಸ್ಥಾನದ ಚುನಾವಣೆ ದಿಢೀರ್ ಮುಂದೂಡಿಕೆ..!!

ಈ ಮಹತ್ವದ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ನೀಡಿದ ಸಲಹೆಯ ಮೇರೆಗೆ ಚಾಲನೆ ದೊರೆತಿದೆ.
ಮುಖ್ಯವಾಗಿ ಕೆಳ ಹಂತದ ಪೊಲೀಸ್ ಸಿಬ್ಬಂದಿಗಳಾದ ಪೊಲೀಸ್ ಕಾನ್ಸ್ಟೇಬಲ್ಗಳು (PC), ಹೆಡ್ ಕಾನ್ಸ್ಟೇಬಲ್ಗಳು (HC), ಸಹಾಯಕ ಪೊಲೀಸ್ ಉಪನಿರೀಕ್ಷಕರು (ASI) ಈ ಶ್ರೇಣಿಯ ಅಧಿಕಾರಿಗಳಿಗೆ ಈ ರಜೆ ಸೌಲಭ್ಯ ಅನ್ವಯವಾಗಲಿದೆ.
ಈ ಆದೇಶದಿಂದ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಷಮತೆ ಹೆಚ್ಚುವುದರ ಜೊತೆಗೆ ಮಾನಸಿಕ ಒತ್ತಡ ಕಡಿಮೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಪೊಲೀಸ್ ಇಲಾಖೆಯ ಈ ನಿರ್ಧಾರವನ್ನು ಸಿಬ್ಬಂದಿ ವಲಯದಲ್ಲಿ ಸಂತಸ ಮೂಡಿಸಿದೆ.
MUST WATCH : ಮಹಿಳೆಯರಿಗೆ ರಾಜ್ಯದಲ್ಲಿ ಸುರಕ್ಷತೆಯಿಲ್ಲವಿ.ಪ.ನಲ್ಲಿ ರಾಜೀವ್ ಗೌಡ ಕೇಸ್ ಗದ್ದಲ




