Bengaluru : ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯಗೊಳಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಅವರು ಮಹತ್ವ ನಿರ್ಧಾರ ತೆಗೆದುಕೊಂಡಿದ್ದಾರೆ.

Bengaluru : ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಅವರು ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.
ಪ್ರತಿ ತಿಂಗಳ ಮೊದಲ ವಾರ ಖಾದಿ ಬಟ್ಟೆ ಧರಿಸುವುದು ಕಡ್ಡಾಯ
ಈ ನಿರ್ಧಾರಕ್ಕೆ ಏಪ್ರಿಲ್ 24ರಿಂದ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು, ಎಲ್ಲಾ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸಬೇಕು ಎಂದು ಸೂಚಿಸಲಾಗಿದೆ.
ಇದನ್ನೂ ಓದಿ : ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರಿಗೆ Good ನ್ಯೂಸ್.!

ಪುರುಷ ಸರ್ಕಾರಿ ನೌಕರರು ಖಾದಿ ಬಟ್ಟೆಯ ಪ್ಯಾಂಟ್, ಶರ್ಟ್ ಹಾಗೂ ಓವರ್ ಕೋಟ್ ಧರಿಸಬೇಕು. ಮಹಿಳಾ ಸರ್ಕಾರಿ ನೌಕರರು ಖಾದಿ ಸಿಲ್ಕ್ ಸೀರೆ ಅಥವಾ ಖಾದಿ ಚೂಡಿದಾರವನ್ನು ಬಳಸಿಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನು, ಸರ್ಕಾರಿ ನೌಕರರು ಖಾದಿ ಬಟ್ಟೆಗಳನ್ನು ಸರ್ಕಾರಿ ಸ್ವಾಮ್ಯದ ಖಾದಿ ಹಾಗೂ ಗ್ರಾಮೋದ್ಯೋಗ ಮಳಿಗೆಗಳಲ್ಲಿಯೇ ಖರೀದಿಸಬೇಕು ಎಂದು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸದ್ಯ ನೀಡುತ್ತಿರುವ ರಿಯಾಯಿತಿಗಿಂತ ಹೆಚ್ಚುವರಿಯಾಗಿ ಮತ್ತಷ್ಟು 5% ರಿಯಾಯಿತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ನಿರ್ದೇಶನ ನೀಡಿದ್ದಾರೆ.
ಖಾದಿ ಬಳಕೆಯನ್ನು ಉತ್ತೇಜಿಸುವುದು, ಸ್ಥಳೀಯ ಉದ್ಯೋಗಕ್ಕೆ ಬೆಂಬಲ ನೀಡುವುದು ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
MUST WATCH: ಚಿನ್ನ ಅಲ್ಲ ಬೆಳ್ಳಿ ದರವೂ ಹೆಚ್ಚಳ ಇವತ್ತಿನ ರೇಟ್ ಕೇಳಿದ್ರೆ ಶಾಕ್ ಆಗ್ತಿರಾ




