Chamarajanagara : ರಿಸಪ್ಷೆನ್ಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕೊಳ್ಳೇಗಾಲ (Kollegala) ಪಟ್ಟಣದಲ್ಲಿ ನಡೆದಿದೆ.

Chamarajanagara : ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ನಿವಾಸಿ ಎಲ್. ರವೀಶ್ (34) ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ
ರವೀಶ್ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿದ್ದು, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಕೊಳ್ಳೇಗಾಲದ ಎಂಜಿಎಸ್ವಿ ಕಾಲೇಜು ರಸ್ತೆಯ ಬಳಿ ಹಿಂಬಾಲಿಸಿಕೊಂಡು ಬಂದ ಕಾರಿನಲ್ಲಿದ್ದ ದುಷ್ಕರ್ಮಿಗಳು ವರ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ : Lover ಜೊತೆ ಯುವತಿ ಎಸ್ಕೇಪ್ ಕೇಸ್ಗೆ ಟ್ವಿಸ್ಟ್ – ಕೀಚಕಿ ಕೊನೆಗೂ ಅಂದರ್..!!

ಈ ವೇಳೆ ರವೀಶ್ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದು, ಎಡಗೈ ತೋಳಿಗೆ ಚಾಕು ಇರಿದು ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಗಾಯಗೊಂಡ ರವೀಶ್ ರನ್ನು ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ.
ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ರವೀಶ್, “ಆರು ತಿಂಗಳ ಹಿಂದೆ ನನ್ನ ಎಂಗೇಜ್ಮೆಂಟ್ ನಡೆದಿತ್ತು. ಜ.30ರಂದು ಮದುವೆ ನಿಶ್ಚಯವಾಗಿತ್ತು. ಆರತಕ್ಷತೆಗೆ ತೆರಳುವಾಗ ಹಿಂಬದಿಯಿಂದ ಬಂದವರು ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ರು. ನನ್ನ ಮೇಲೆ ಹಲ್ಲೆ ನಡೆಸಿದವರು ಯಾರೆಂದು ತಿಳಿದಿಲ್ಲ” ಎಂದು ಹೇಳಿದ್ದಾರೆ.
ಸದ್ಯ ವಿಷಯ ತಿಳಿದು ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ರವೀಶ್ ಅವರಿಂದ ಹೇಳಿಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
MUST WATCH : ಕೋಲಾರದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬ* ಕೊ* – ಸೋಷಿಯಲ್ ಮೀಡಿಯಾದಲ್ಲಿ ಕೊ*ಗಾರ ಪ್ರತ್ಯಕ್ಷ




