Big Twist : ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನಲ್ಲಿ ನಾಲ್ಕು ತಿಂಗಳ ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಲೆಗೈದ ಪ್ರಕರಣದಲ್ಲಿ ಭಯಾನಕ ಸತ್ಯ ಬಹಿರಂಗವಾಗಿದೆ.

Big Twist : ಜಿಲ್ಲೆಯ ಸಿರವಾರ ತಾಲ್ಲೂಕಿನಲ್ಲಿ ನಡೆದ ಗರ್ಭಿಣಿ ಸೊಸೆ ಕೊಲೆ ಪ್ರಕರಣ ಇದೀಗ ಭಯಾನಕ ತಿರುವು ಪಡೆದುಕೊಂಡಿದೆ.
ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಸೊಸೆಯನ್ನು ಕತ್ತು ಸೀಳಿ ಕೊಲೆ ಮಾಡಿದ ಮಾವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಸತ್ಯ ಬಹಿರಂಗವಾಗಿದೆ.
ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಚಿಕ್ಕ ಹಣಗಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ನಿನ್ನೆ (ಜನವರಿ 29) ಬೆಳಕಿಗೆ ಬಂದ ಈ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಆರಂಭದಲ್ಲಿ ಕೌಟುಂಬಿಕ ಕಲಹ ಶಂಕೆ
ಆರಂಭದಲ್ಲಿ ಈ ಕೊಲೆ ಕೌಟುಂಬಿಕ ಕಲಹದ ಹಿನ್ನೆಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದರು.
ಮಾವ ಸಿದ್ದಪ್ಪ (50) ತನ್ನ ನಾಲ್ಕು ತಿಂಗಳ ಗರ್ಭಿಣಿ ಸೊಸೆ ರೇಖಾ (24)ಳ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ ಎನ್ನಲಾಗಿತ್ತು.ಆದರೆ, ತನಿಖೆ ಮುಂದುವರಿದಂತೆ ನಿಜವಾದ ಉದ್ದೇಶ ಬಹಿರಂಗವಾಗಿದೆ.
ಇದನ್ನೂ ಓದಿ : Lover ಜೊತೆ ಯುವತಿ ಎಸ್ಕೇಪ್ ಕೇಸ್ಗೆ ಟ್ವಿಸ್ಟ್ – ಕೀಚಕಿ ಕೊನೆಗೂ ಅಂದರ್..!!

ಗುರುವಾರ ರೇಖಾಳ ಮನೆಗೆ ಬಂದ ಮಾವ ಸಿದ್ದಪ್ಪ, ಏಕಾಏಕಿ ಸೊಸೆಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ.
ಗಂಭೀರ ಗಾಯಗೊಂಡ ರೇಖಾ ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಗೆ ಓಡಿದರೂ, ರಕ್ತಸ್ರಾವದಿಂದ ನರಳಾಡಿ ಸಾವನ್ನಪ್ಪಿದ್ದಾಳೆ.ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದ.
ಪರಾರಿಯಾಗಿದ್ದ ಆರೋಪಿ ಸಿದ್ದಪ್ಪನನ್ನು ಕವಿತಾಳ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ, ಕೊಲೆಯ ಹಿಂದಿನ ನಿಜವಾದ ಕಾರಣ ಬೆಳಕಿಗೆ ಬಂದಿದೆ.

ಸೊಸೆಯ ಆಸ್ತಿಯ ಮೇಲೆ ಕಣ್ಣು ಹಾಕಿದ್ದೇ ಕೊಲೆಗೆ ಪ್ರಮುಖ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಸೊಸೆಯ ಆಸ್ತಿಯ ಮೇಲೆ ಕಣ್ಣು ಹಾಕಿದ್ದೇ ಈ ಕೊಲೆಗೆ ಪ್ರಮುಖ ಕಾರಣವಾಗಿದ್ದು, ಆಸ್ತಿ ವಿಚಾರವಾಗಿ ಸಿದ್ದಪ್ಪ ನಿತ್ಯ ಕಿರುಕುಳ ನೀಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಸೊಸೆ ಆಸ್ತಿ ಕೇಳುತ್ತಿಲ್ಲ, ಮನೆ ಹಾಗೂ ಹೊಲದ ಕೆಲಸ ಮಾಡುತ್ತಿಲ್ಲ ಎಂಬ ನೆಪ ಹೇಳಿಕೊಂಡು ಅವಳಿಗೆ ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದುದನ್ನು ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.
MUST WATCH : ಕೋಲಾರದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬ* ಕೊ* – ಸೋಷಿಯಲ್ ಮೀಡಿಯಾದಲ್ಲಿ ಕೊ*ಗಾರ ಪ್ರತ್ಯಕ್ಷ




