
CHICKABULAPURA : ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಜಾತಿಗಣತಿಯ ವಿಚಾರವಾಗಿ ಬಿಜೆಪಿ ಕೆಂಡಾಮಂಡಲವಾಗಿದ್ದು, ಎಲ್ಲೆಡೆ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ಅದರಂತೆ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಮುಖಂಡರು ಡಿಸಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಒಕ್ಕಲಿಗ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್ ಎಂದು ಕ್ರಿಶ್ಚಿಯನ್ ಸಂಪ್ರದಾಯ ಮಾಡಲು ಮುಂದಾಗಿದೆ ಎಂದು ಕಿಡಿಕಾರಿದ್ರು
ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಮುಖಂಡರ ಸೀಕಲ್ ರಾಮಚಂದ್ರ ಮಾತನಾಡಿ, ಸರ್ಕಾರ ಸಂವಿಧಾನದಲ್ಲಿ ಇಲ್ಲದೇ ಇರುವ ಜಾತಿಗಳನ್ನು ಹುಟ್ಟುಹಾಕುತ್ತಿದೆ ಈ ಕಾಂಗ್ರೆಸ್ ಸರ್ಕಾರ. ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಹೋರಾಟಗಳು ಶುರುವಾಗಿದೆ. ಹಿಂದು ವನ್ನು ಹಿಂದು,ಮುಸ್ಲಿಂ ಅನ್ನು ಮುಸ್ಲಿಂ, ಕ್ರಿಶ್ಚಿಯನ್ ಅನ್ನು ಕ್ರಿಶ್ಚಿಯನ್ ಎಂದು ಮಾಡಬೇಕು. ದೇಶದಲ್ಲಿ ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಕ್ರಿಶ್ಚಿಯನ್ ಸಂಪ್ರದಾಯ ಮಾಡಲು ಮುಂದಾಗುತ್ತಿದೆ ಎಂದರು.
ಇನ್ನು ಪ್ರತಿಭಟನೆಯಲ್ಲಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ರು.




