ಸರ್ಕಾರಿ ಸಾರಿಗೆ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಗರ ಪೊಲೀಸ್ ಠಾಣೆಯ Head Constable ಬೀರಲಿಂಗ (41) ಸಾವನ್ನಪ್ಪಿದ್ದಾರೆ.

ಚನ್ನರಾಯಪಟ್ಟಣದಲ್ಲಿ (Channarayapatna) ಬೈಕ್ ಮತ್ತು ಸರ್ಕಾರಿ ಸಾರಿಗೆ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ Head Constable ಒಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ಬೀರಲಿಂಗ (41). ಅವರು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಅಪಘಾತ ಹೇಗೆ ಸಂಭವಿಸಿತು?
ಮಧ್ಯಾಹ್ನ ವೇಳೆ ಬೀರಲಿಂಗ ಅವರು ಪೊಲೀಸ್ ಕ್ವಾಟರ್ಸ್ನಲ್ಲಿರುವ ತಮ್ಮ ಮನೆಗೆ ಊಟಕ್ಕಾಗಿ ಬೈಕ್ನಲ್ಲಿ ತೆರಳುತ್ತಿದ್ದರು. ಈ ಸಂದರ್ಭ, ಎದುರಿನಿಂದ ಬಂದ ಸಾರಿಗೆ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ.
ಇದನ್ನು ಓದಿ : Love Marriage ಆದ ಪ್ರಣಯ ಪಕ್ಷಿಗಳು -ಹೆತ್ತವರಿಗೆ ಹೆದರಿ ರಕ್ಷಣೆಗಾಗಿ ಅಲೆದಾಟ..!!!
ಡಿಕ್ಕಿಯ ಪರಿಣಾಮ ಬೀರಲಿಂಗ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ತನಿಖೆ
ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನು ನೋಡಿ : ತೀರ್ಥಪುರ ಗ್ರಾ.ಪಂ.ಯ ಕರ್ಮಕಾಂಡ..ಹಳ್ಳಿಗಳಲ್ಲಿ ಗಬ್ಬೆದ್ದು ನಾರ್ತಿವೆ




