ಮಹಿಳಾ ಅಧಿಕಾರಿಗೆ ಧಮ್ಕಿ ಕೇಸ್ – Rajeev Gowda ಷರತ್ತುಬದ್ಧ ಜಾಮೀನು ಮಂಜೂರು.

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ ಆರೋಪದಡಿ ಬಂಧನವಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರಿಗೆ ಇಂದು ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಮಹಿಳಾ ಅಧಿಕಾರಿಗೆ ಧಮ್ಕಿ
ಬ್ಯಾನರ್ ತೆರವಿನ ವಿಚಾರಕ್ಕೆ ಸಂಬಂಧಿಸಿದಂತೆ ದೂರವಾಣಿ ಮೂಲಕ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ರಾಜೀವ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಪೌರಾಯುಕ್ತೆ ಪೊಲೀಸರಿಗೆ ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ಕೇರಳ ಗಡಿಯಲ್ಲಿ ರಾಜೀವ್ ಗೌಡ ಅವರನ್ನು ಬಂಧಿಸಿದ್ದರು.
ಇದನ್ನು ಓದಿ : ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ Inspector

ಷರತ್ತುಬದ್ಧ ಜಾಮೀನು ಮಂಜೂರು – Rajeev Gowda
ಬಂಧನದ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನಂತರ ರಾಜೀವ್ ಗೌಡ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆಯನ್ನು ಶಿಡ್ಲಘಟ್ಟ ಜೆಎಂಎಫ್ಸಿ ಕೋರ್ಟ್ ಇಂದು ನಡೆಸಿ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಇದನ್ನು ನೋಡಿ : ನೌಕರರಿಗೆ ಸರ್ಕಾರಿದಿಂದ ಬಂಪರ್ ಗಿಫ್ಟ್ ಗೌರ್ನಮೆಂಟ್ ಎಂಪ್ಲಾಯ್ಸ್ ಫುಲ್ ಖುಷ್




