ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ CJ Roy ಅವರು ಲ್ಯಾಂಗ್ಫೋರ್ಡ್ ರಸ್ತೆಯ ನಿವಾಸದಲ್ಲಿ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ CJ Roy ಅವರು ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಲ್ಯಾಂಗ್ಫೋರ್ಡ್ ರಸ್ತೆಯ ನಿವಾಸದಲ್ಲಿ ಘಟನೆ
ಬೆಂಗಳೂರಿನ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ತಮ್ಮ ಬಂಗಲೆಯಲ್ಲಿ ಸಿ.ಜೆ ರಾಯ್ ಅವರು ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ದುರ್ಘಟನೆ ನಗರದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಇದನ್ನು ಓದಿ : Love Marriage ಆದ ಪ್ರಣಯ ಪಕ್ಷಿಗಳು -ಹೆತ್ತವರಿಗೆ ಹೆದರಿ ರಕ್ಷಣೆಗಾಗಿ ಅಲೆದಾಟ..!!!

ಐಟಿ ದಾಳಿ ಹಿನ್ನೆಲೆ?
ಪ್ರಾಥಮಿಕ ಮಾಹಿತಿಯ ಪ್ರಕಾರ, ಐಟಿ ಅಧಿಕಾರಿಗಳ ದಾಳಿ ನಡೆದಿದ್ದ ಸಂದರ್ಭದಲ್ಲೇ ಈ ಘಟನೆ ಸಂಭವಿಸಿರುವ ಸಾಧ್ಯತೆ ಇದೆ. ಐಟಿ ದಾಳಿಯಿಂದ ಉಂಟಾದ ಮಾನಸಿಕ ಒತ್ತಡವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆಯಾದರೂ, ಇದನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಲಾಗಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಲು ಸಮಗ್ರ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : ತೀರ್ಥಪುರ ಗ್ರಾ.ಪಂ.ಯ ಕರ್ಮಕಾಂಡ..ಹಳ್ಳಿಗಳಲ್ಲಿ ಗಬ್ಬೆದ್ದು ನಾರ್ತಿವೆ




