Breaking News : ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಭ್ರಷ್ಟರಿಗೆ ನಡುಕ ಹುಟ್ಟಿಸುವ ಕೆಲಸ ಮಾಡ್ತಾ ಇದ್ದು, ಇತ್ತ ತುಮಕೂರಿನಲ್ಲಿ ಸಬ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

Breaking News : ನಿನ್ನೆ ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ರಾಜ್ಯಾದ್ಯಂತ ದೊಡ್ಡ ಸಂಚಲನವನ್ನೇ ಸೃಷ್ಟಿ ಮಾಡಿತ್ತು.
ಈ ಘಟನೆ ಮಾಸುವ ಮುನ್ನವೇ ತುಮಕೂರಿನಲ್ಲೂ ಸಬ್ ಇನ್ಸ್ಪೆಕ್ಟರ್ ಒಬ್ಬರು ಲೋಕಾ ಬಲೆಗೆ ಬಿದ್ದಿದ್ದಾರೆ. ಪೊಲೀಸ್ ಅಧಿಕಾರಿಗಳು ಒಬ್ಬೊಬ್ಬರೇ ಲೋಕಾ ಬಲೆಗೆ ಬೀಳ್ತಾ ಇದ್ದು, ಪೊಲೀಸ್ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವ ಆಡ್ತಾ ಇದ್ಯಾ ಎಂಬ ಅನುಮಾನ ಮೂಡಿದೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಲ ದಿನಗಳ ಹಿಂದೆ ತುಮಕೂರು ನಗರದ ಹೊರವಲಯದ ಕೆಸರಮಡು ಬಳಿಯ ದರ್ಗಾದ ಮುಂದೆ ನಿಂತಿದ್ದ ಬೆಂಗಳೂರು ಮೂಲದ ವಕೀಲ ಶ್ರೀಧರ್ ಎಂಬುವವರಿಗೆ ಸೇರಿದ್ದ ಕಾರನ್ನು ಪಿಎಸ್ಐ ಚೇತನ್ ಕುಮಾರ್ ವಶಕ್ಕೆ ಪಡೆದಿದ್ದರು.
ಕಾರನ್ನು ಬಿಡಲು ಪಿಎಸ್ಐ ಚೇತನ್ 5 ಲಕ್ಷಕ್ಕೆ ಬೇಡಿಕೆ ಇಟ್ಟಿರೋ ಆರೋಪ ಕೇಳಿಬಂದಿದೆ. ಅಲ್ದೇ ಕಾರಿನಲ್ಲಿ ಗಾಂಜಾ ಸಾಗಾಟ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂಬ ಆರೋಪ ಮಾಡಲಾಗಿದ್ದು, 1 ಲಕ್ಷ ಹಣ ಪಡೆದು ಕಾರು ಬಿಡಲು ತೀರ್ಮಾನ ಆಗಿತ್ತು ಎನ್ನಲಾಗಿದೆ.
ಇದನ್ನೂ ಓದಿ : ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ Inspector

ಕಳೆದ ರಾತ್ರಿ ಪ್ರಕರಣ ಸಂಬಂಧ ಪಿಎಸ್ಐ ಚೇತನ್ ಕುಮಾರ್ 40 ಸಾವಿರ ಹಣವನ್ನು ಅಡ್ವಾನ್ಸ್ ಆಗಿ ಹಣ ಪಡೆದಿದ್ದಾರೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ಲೋಕಾಯುಕ್ತ ಪೊಲೀಸ್ ಮಂಜೇಗೌಡ ನೇತೃತ್ವದ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ, ನಿನ್ನೆ ಮಧ್ಯರಾತ್ರಿಯೇ ಪಿಎಸ್ಐ ಚೇತನ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಬೆಳಗ್ಗೆ ಪಿಎಸ್ಐ ಚೇತನ್ ಅವರನ್ನು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದು, ಬಳಿಕ ಲೋಕಾ ಬಲೆಗೆ ಬಿದ್ದ ಪಿಎಸ್ಐ ಚೇತನ್ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿ, ಮುಂದಿನ ಕ್ರಮಕ್ಕೆ ಲೋಕಾಯುಕ್ತ ಅಧಿಕಾರಿಗಳು ಮುಂದಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಭ್ರಷ್ಟ ಪೊಲೀಸರಿಗೆ ಲೋಕಾಯುಕ್ತ ಅಧಿಕಾರಿಗಳು ನಡುಕ ಹುಟ್ಟಿಸಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದು ರಾಜ್ಯದಲ್ಲಿ ಸಂಚಲನವನ್ನು ಸೃಷ್ಟಿಮಾಡಿದೆ.
ಅದೇನೆ ಆಗಲಿ ಜನರನ್ನು ರಕ್ಷಣೆ ಮಾಡುವ, ಜನರಿಗೆ ನ್ಯಾಯ ಒದಗಿಸುವ ಇಲಾಖೆಯಲ್ಲೇ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಜನರಲ್ಲಿ ಪೊಲೀಸ್ ಇಲಾಖೆಯ ಮೇಲೆಯೇ ನಂಬಿಕೆ ಕಳೆದುಕೊಳ್ಳುವಂತ ಸ್ಥಿತಿ ನಿರ್ಮಾಣ ಆಗಿದೆ.
MUST WATCH : ಲಂಚಕ್ಕೆ ಡಿಮ್ಯಾಂಡ್ ಮಾಡಿದ ಪೊಲೀಸಪ್ಪ- ತಗ್ಲಾಕಿಕೊಳ್ಳುತ್ತಿದ್ದಂತೆ ಫುಲ್ ಡ್ರಾಮಾ..?




