C.J Roy ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ನಡೆಯಲಿರುವ ಅಂತ್ಯಕ್ರಿಯೆ.

ಪ್ರಸಿದ್ದ ರಿಯಲ್ ಎಸ್ಟೇಟ್ ಕಂಪನಿ ಕಾನ್ಪಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಕಾನ್ಪಿಡೆಂಟ್ ಗ್ರೂಪ್ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಖ್ಯಾತ ಉದ್ಯಮಿ ಡಾ.ಸಿಜೆ ರಾಯ್ ಅವರಿಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ಅಂತ್ಯಕ್ರಿಯೆ
ಈ ಹಿಂದೆ ತಮ್ಮ ಆಪ್ತರ ಬಳಿ ವ್ಯಕ್ತಪಡಿಸಿದ್ದ ಆಶಯದಂತೆ, C.J Royಅವರ ಅಂತ್ಯಕ್ರಿಯೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ನಡೆಯಲಿದೆ. ಅಂತ್ಯಸಂಸ್ಕಾರಕ್ಕೂ ಮುನ್ನ, ಮೃತ ರಾಯ್ ಪಾರ್ಥಿವ ಶರೀರವನ್ನು ಕೋರಮಂಗಲದಲ್ಲಿರುವ ವೈಟ್ ಗೋಲ್ಡ್ ಸಂಸ್ಥೆಯ ಮಾಲೀಕ ಹಾಗೂ ಸಹೋದರ ಬಾಬು ಜೋಸೆಫ್ ಅವರ ಒಡೆತನದ ‘ವೈಟ್ ಹೌಸ್’ನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ಇದನ್ನು ಓದಿ : Rajeev Gowdaಗೆ ಷರತ್ತುಬದ್ಧ ಜಾಮೀನು ಮಂಜೂರು

ರಾಜಕಾರಣಿಗಳು ಭಾಗವಹಿಸುವ ಸಾಧ್ಯತೆ
ಇಂದು ಸಂಜೆ ಡಾ. ಸಿ.ಜೆ. ರಾಯ್ ಅವರ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆಯಿದ್ದು, ನಾಡಿನ ಪ್ರಮುಖ ಉದ್ಯಮಿಗಳು, ಸಿನಿಮಾ ತಾರೆಯರು ಮತ್ತು ರಾಜಕಾರಣಿಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನು ನೋಡಿ : ಬೇಲೂರಿನಲ್ಲಿ ಹೆಚ್ಚಾಗ್ತಿದೆ ಗಾಂಜಾ ಮಾರಾಟ – ಬಿಹಾರ ಮೂಲದ ಯುವಕ ಅರೆಸ್ಟ್




