Murugha Shree ಗೆ ಮತ್ತೊಮ್ಮೆ ಎದುರಾದ ಸಂಕಷ್ಟ; ಕೋರ್ಟ್ ನಿರ್ಬಂಧ ಮೀರಿ ಮಠದ ನಿವೇಶನ ಮಾರಾಟ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮುರುಘಾಮಠದ ಮಾಜಿ ಪೀಠಾಧಿಪತಿ ಮುರುಘಾಶ್ರೀ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ Murugha Shree ವಿರುದ್ಧ ಹೊಸದುರ್ಗ ನ್ಯಾಯಾಲಯದಲ್ಲಿ ದಾವೆ ದಾಖಲಾಗಿದೆ.
ಕೋರ್ಟ್ ಮೊರೆ
ಮುರುಘಾಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರು ಈ ಸಂಬಂಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಸರ್ಕಾರದಿಂದ ನೇಮಕಗೊಂಡಿರುವ ಮಠದ ಆಡಳಿತ ಸಮಿತಿಗೆ ಪ್ರಕಾಶ್ ಎಂಬುವರಿಂದ ಈ ಬಗ್ಗೆ ದೂರು ಬಂದಿತ್ತು ಈ ಹಿನ್ನೆಲೆಯಲ್ಲಿ ವಿಷಯವನ್ನು ಪರಿಶೀಲಿಸಲಾಗಿದ್ದು, ಬಳಿಕ ಕೋರ್ಟ್ ಮೊರೆ ಹೋಗಲಾಗಿದೆ.
ಇದನ್ನು ಓದಿ : ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ತುಮಕೂರು PSI.!

ಪ್ರಕರಣ ದಾಖಲು
ಇದ್ದರೂ ಮುರುಘಾಶ್ರೀ ಅವರು ಹೊಸದುರ್ಗದ ಎಂ. ಮಂಜುನಾಥ್ ಅವರಿಗೆ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ನೀಡಿದ್ದು, ಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಮಮತಾ ಹಾಗೂ ನಳಿನಿ ಎಂಬವರಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಜ.30ರಂದು ಮುರುಘಾಮಠದ ಆಡಳಿತ ಸಮಿತಿ ಅಧಿಕೃತವಾಗಿ ಹೊಸದುರ್ಗ ನ್ಯಾಯಾಲಯವನ್ನು ಸಂಪರ್ಕಿಸಿದೆ. ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿಯಲಿದೆ.
ಈಗಾಗಲೇ A1 ಆರೋಪಿಯಾಗಿರುವ Murugha Shree
ಇನ್ನು, ಮುರುಘಾಶ್ರೀ ವಿರುದ್ಧ ಈಗಾಗಲೇ ಫೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿದ್ದು, ಆ ಪ್ರಕರಣದಲ್ಲಿ ಅವರು ಎ1 ಆರೋಪಿಯಾಗಿದ್ದಾರೆ. ಈ ಹಿನ್ನೆಲೆ ಕೋರ್ಟ್ ಅವರ ಮೇಲೆ ಆಸ್ತಿ ವಹಿವಾಟು ನಡೆಸದಂತೆ ನಿರ್ಬಂಧ ವಿಧಿಸಿತ್ತು. ಆದರೂ ಆ ನಿರ್ಬಂಧವನ್ನು ಉಲ್ಲಂಘಿಸಿ ನಿವೇಶನಗಳ ಮಾರಾಟ ನಡೆದಿದೆ ಎಂಬುದು ಮಠದ ಆಡಳಿತ ಸಮಿತಿಯ ಗಂಭೀರ ಆರೋಪವಾಗಿದೆ.

ಇದನ್ನು ನೋಡಿ : ಧಗಧಗನೇ ಹೊತ್ತಿ ಉರಿದ ಗಿಡ ಮರಗಳು ಕಿಡಿಗೇಡಿಗಳ ಕೃತ್ಯಕ್ಕೆ ಎಲ್ಲೆಡೆ ಜನಾಕ್ರೋಶ




