ನಟ ಯಶ್ ತಾಯಿ Hassan ಸೈಟ್ ಜಟಾಪಟಿ – ಕಾಂಪೌಂಡ್ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ.

Hassan : ರಾಕಿಂಗ್ ಸ್ಟಾರ್ ಯಶ್ ತಾಯಿ ಮನೆ ಸಮೀಪದ ನಿವೇಶನ ಮಾಲೀಕತ್ವ ಜಟಾಪಟಿ ಮತ್ತೆ ಸುದ್ದಿಯಾಗಿದೆ. ಯಶ್ ತಾಯಿ ಮನೆ ಬಳಿಯ ಕಾಂಪೌಂಡ್ ಕೆಡವಿಸಿದ್ದ ಮಾಲೀಕನ ಜೊತೆ ಪುಷ್ಪಾ ಅರುಣ್ಕುಮಾರ್ ವಾಗ್ವಾದ ನಡೆಸಿದ್ದಾರೆ.
ಯಶ್ ತಾಯಿ Hassan ಸೈಟ್
ಯಶ್ ತಾಯಿ ಪುಷ್ಪಾ ಅರುಣ್ಕುಮಾರ್ ಅವರು ತಮ್ಮ ಮನೆ ಬಳಿಯ ಸೈಟ್ ಬಳಿ ಆಗಮಿಸಿ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಇದೇ ವೇಳೆ ದೇವರಾಜು ಸ್ಥಳಕ್ಕೆ ಆಗಮಿಸಿದ್ದಾರೆ. ದೇವರಾಜು ಅವರಿಗೆ ದಾಖಲೆಗಳನ್ನು ತೋರಿಸು ಎಂದ ಪುಷ್ಪಾ ಅವರು ಕೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ ಈ ಸಂದರ್ಭ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಸೆಲೆಬ್ರಿಟಿ ನನ್ನ ಮಗ, ನಾನಲ್ಲ
ದೇವರಾಜು ಅವರಿಗೆ ದಾಖಲೆಗಳನ್ನು ತೋರಿಸುವಂತೆ ಪುಷ್ಪಾ ಅವರು ಪ್ರಶ್ನಿಸಿದ್ದು, “ಸೆಲೆಬ್ರಿಟಿ ನನ್ನ ಮಗ, ನಾನಲ್ಲ. ನಾನು ಇಲ್ಲಿಯೇ ಹುಟ್ಟಿ ಬೆಳೆದವಳು. ಸೈಟ್ ಒಳಗೆ ಕಾಲಿಡಬೇಡ” ಎಂದು ಏರುದನಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ದೇವರಾಜು, ಈ ರೀತಿ ಮಾತನಾಡಬಾರದು ಎಂದು ಹೇಳಿದ್ದಾರೆ. ಇದೇ ವೇಳೆ ಪುಷ್ಪಾ ಅರುಣ್ಕುಮಾರ್, “ರೌಡಿಗಳನ್ನು ಕರೆದುಕೊಂಡು ರೌಡಿಸಂ ಮಾಡ್ತೀಯಾ? ನಾನು SPಗೆ ದೂರು ಕೊಡ್ತೀನಿ. ಇನ್ಮುಂದೆ ಇಲ್ಲಿಗೆ ಕಾಲಿಟ್ಟರೆ ಸುಮ್ಮನ್ನಿರಲ್ಲ” ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಇದನ್ನು ಓದಿ : GOVT ಬಸ್ಗಳಲ್ಲಿ ಇನ್ಮುಂದೆ ಜಾಹೀರಾತಿಗೆ ಸಂಪೂರ್ಣ ನಿಷೇಧ.!

ಏನಿದು ಪ್ರಕರಣ..?
ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ ಪ್ರಕರಣದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಕೋರ್ಟ್ ಶಾಕ್ ಕೊಟ್ಟಿತ್ತು. ಬೇರೆಯವರ ಜಾಗದಲ್ಲಿ ನಿರ್ಮಿಸಿದ್ದಾರೆ ಎನ್ನಲಾದ ಕಾಂಪೌಂಡ್ನ್ನು ಧ್ವಂಸಗೊಳಿಸಲಾಗಿತ್ತು. ಹಾಸನ ನಗರದ ವಿದ್ಯಾ ನಗರದಲ್ಲಿ ಪುಷ್ಪಾ ಅವರ ಮನೆ ಇದೆ.
ಇವರು ನಿರ್ಮಿಸಿದ್ದ ಕಾಂಪೌಂಡ್ನ್ನು ಮೂಲ ಮಾಲೀಕ ಧ್ವಂಸಗೊಳಿಸಿದ್ದರು. ಜೆಸಿಬಿ ಮೂಲಕ ಕಾಂಪೌಂಡ್ ನೆಲಸಮಗೊಳಿಸಿದ್ದರು. 1,500 ಅಡಿ ಜಾಗವನ್ನು ಒತ್ತುವರಿ ಮಾಡಿದ ಆರೋಪ ಇವರ ಮೇಲಿತ್ತು. ಕೋರ್ಟ್ ಅನುಮತಿಯ ಮೇರೆಗೆ ಕಾಂಪೌಂಡ್ ತೆರವುಗೊಳಿಸಲಾಗಿತ್ತು.

ಇದನ್ನು ನೋಡಿ : ಅಧಿವೇಶನದಲ್ಲಿ ಕಾಂಗ್ರೆಸ್ ವಿರುದ್ಧ ಶಾಸಕ ಎಸ್. ಸುರೇಶ ಕುಮಾರ್ ಕೆಂಡಾಮಂಡಲ




