
DAVANAGAERE ACCIDENT : KSRTC ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಣಿವೆಹಳ್ಳಿಯಲ್ಲಿ ನಡೆದಿದೆ. ಬಸ್ ಹೊಸಪೇಟೆ ಯಿಂದ ದಾವಣಗೆರೆಗೆ ತೆರಳುತ್ತಿದ್ದು, ಮಧ್ಯಮಾರ್ಗದಲ್ಲಿ ಈ ದುರ್ಘಟನೆ ಸಂಭವಿಸಿದೆ.
ನೆನ್ನೆ ಸಂಜೆ ಸಂಭವಿಸಿದ ಈ ಅಪಘಾತದಲ್ಲಿ ಬಸ್ನಲ್ಲಿ ಪ್ಯಾಣಿಸುತ್ತಿದ್ದ 16 ಪ್ರಯಾಣಿ ಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃ ಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿ ಸಿಲ್ಲ.
ಇನ್ನು ಘಟನಾ ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




