Bengaluru : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಳಿಕ ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ Bengaluru ನಗರದಲ್ಲಿ ನಡೆದಿದೆ. ಮನೆಗೆಲಸದವನೇ ಮನೆಯ ಮಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಕಿದ್ದಾನೆ. ಬಳಿಕ ತಾನೂ ಸತ್ತಿದ್ದಾನೆ.

ಇದನ್ನು ಓದಿ : ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ
ಕೊಲೆಗೈದು ತಾನೂ ಸತ್ತ ವ್ಯಕ್ತಿ! – Bengaluru
ಬೆಂಗಳೂರಿನ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯನ್ನು ಅತ್ಯಾಚಾರವೆಸಗಿ, ಬಳಿಕ ನೇಣು ಬಿಗಿದುಕೊಂಡು ಆರೋಪಿ ದೇವರಾಜು (50) ಆತ್ಮಹತ್ಯೆಗೆ ಶರಣಾಗಿದ್ದಾನೆ. ದೇವರಾಜು ಮನೆಗೆಲಸ ಮಾಡುತ್ತಿದ್ದ 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ.

ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ
ಇನ್ನು ಕೃತ್ಯ ನಡೆದಾಗ ಮನೆಯ ಮೊದಲ ಮಹಡಿಯಲ್ಲಿ ಮಹಿಳೆಯ ಪುತ್ರಿ ಇದ್ದರು. ಮುಂಜಾನೆ ಮಹಿಳೆಯ ಪತಿ ಮನೆಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಮೈಕೋ ಲೇಔಟ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರೆದಿದೆ.
ಇದನ್ನು ನೋಡಿ : BREAKING|ವಿಜಯನಗರದಲ್ಲಿ `ತ್ರಿಬಲ್ ಮರ್ಡರ್’ ಕೇಸ್ ಗೆ ಬಿಗ್ ಟ್ವಿಸ್ಟ್.!




