ಬೆಳ್ಳಂಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – Accident ನಲ್ಲಿ ಹಲವು ಮಹಿಳೆಯರಿಗೆ ಗಂಭೀರ ಗಾಯ.

ಬೆಳ್ಳಂಬೆಳಗ್ಗೆ ಇಂಡಿಕೇಟರ್ ಹಾಕದೆ ನಿಂತಿದ್ದ ಲಾರಿಗೆ ಪ್ರಯಾಣಿಕರಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಲವು ಮಹಿಳೆಯರಿಗೆ ಗಂಭೀರ ಗಾಯವಾಗಿರುವ ಘಟನೆ ಶಿರಾ ತಾಲ್ಲೂಕು ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ Accident ಆಗಿರುವ ಘಟನೆ ನಡೆದಿದೆ.

Accident –ಪೊಲೀಸರು ಭೇಟಿ, ಪರಿಶೀಲನೆ
ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಖಾಸಗಿ ಬಸ್ ಚಿತ್ರದುರ್ಗದಿಂದ ಬೆಂಗಳೂರಿಗ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಏಕಾಏಕಿ ಡಿಕ್ಕಿ ಹೊಡೆದಿದೆ.
ಈ ಭೀಕರ ಅಪಘಾತದಲ್ಲಿ ಗಾಯಗೊಂಡಿರುವ ಮಹಿಳೆಯರನ್ನು ಬೆಂಗಳೂರಿನ ಮಾರತಳ್ಳಿಯ ನಿವಾಸಿಗಳು ಎನ್ನಲಾಗಿದ್ದು, ಎಲ್ಲಾ ಮಹಿಳೆಯರು ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಹೋಗಿ ದರ್ಶನ ಪಡೆದುಕೊಂಡು ಹಿಂದಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಇದನ್ನು ಓದಿ : Sira|ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾದ ಪೇಮಿಗಳು

ಪ್ರಕರಣ ದಾಖಲು
ಇನ್ನು ಈ ಅಪಘಾತದಲ್ಲಿ ಬಸ್ ಚಾಲಕನಿಗೆ ಕಾಲು ಮುರಿದ್ದು, ಹಲವು ಮಹಿಳೆಯರ ಸ್ಥಿತಿ ಗಂಭೀರವಾಗಿದೆ. ಮಹಿಳೆಯರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ವಿವಿಧ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಈ ಪ್ರಕರಣ ದಲ್ಲಿ ಲಾರಿ ಚಾಲಕನ ವಿರುದ್ಧವೇ ಪ್ರಕರಣ ದಾಖಲಾಗಿದೆ ಎನ್ನಲಾಗುತ್ತಿದೆ.

ಇದನ್ನು ನೋಡಿ : ಸೈಟ್ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್ ಕಟ್ಟಿಸಲು ಮುಂದಾದ ಯಶ್ ತಾಯಿ




