Bengaluru ದಕ್ಷಿಣ ತಾಲೂಕಿನ ತಾತಗುಣಿ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕ ಜಲಮಂಡಳಿ (BWSSB) ಪೈಪ್ಲೈನ್ನ ತೆರೆದ ಸಂಪ್ನಲ್ಲಿ ಶವವಾಗಿ ಪತ್ತೆಯಾಗಿದೆ.

Bengaluru ದಕ್ಷಿಣ ತಾಲೂಕಿನ ತಾತಗುಣಿ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕನ ಶವ ಬೆಂಗಳೂರು ಜಲಮಂಡಳಿ (BWSSB) ಪೈಪ್ಲೈನ್ ಚೇಂಬರ್ನ ತೆರೆದ ಸಂಪ್ನಲ್ಲಿ ಪತ್ತೆಯಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶ ಮತ್ತು ದುಃಖಕ್ಕೆ ಕಾರಣವಾಗಿದೆ.
ಮೃತ ಬಾಲಕನನ್ನು ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಅವರ ಪುತ್ರ ಪ್ರೀತಮ್ (14) ಎಂದು ಗುರುತಿಸಲಾಗಿದೆ. ರಜನಿಕಾಂತ್ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು.
ಮೂರು ದಿನಗಳ ಹಿಂದೆ ಪ್ರೀತಮ್ ಕಾಣೆಯಾಗಿದ್ದು, ಈ ಕುರಿತು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಪೊಲೀಸರು ಹಾಗೂ ಸ್ಥಳೀಯರು ನಿರಂತರವಾಗಿ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿನ ತೆರೆದ ಸಂಪ್ನಲ್ಲಿ ಬಾಲಕನ ಶವ ಪತ್ತೆಯಾಗಿದೆ.ಶವ ಪತ್ತೆಯಾಗುತ್ತಿದ್ದಂತೆ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.
ಇದನ್ನೂ ಓದಿ : ವರನನ್ನ ಮುಗಿಸಲು Loverಗೆ ಸುಪಾರಿ ಕೊಟ್ಟಿದ್ದೇ ವಧು..!

ಜಲಮಂಡಳಿಯ ನಿರ್ಲಕ್ಷ್ಯ ಆರೋಪ
ಸ್ಥಳೀಯರ ಆರೋಪದಂತೆ, ಕಳೆದ ಹಲವು ದಿನಗಳಿಂದ ಜಲಮಂಡಳಿ ಸಂಪ್ ಅನ್ನು ಮುಚ್ಚದೇ ಬಿಟ್ಟಿತ್ತು. ಬಾಲಕ ಆಟವಾಡುವಾಗ ಅಥವಾ ಓಡಾಡುವ ವೇಳೆ ತಪ್ಪಾಗಿ ಸಂಪ್ಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸ್ ಕ್ರಮ
ಕಗ್ಗಲೀಪುರ ಪೊಲೀಸರು ಶವವನ್ನು ಸಂಪ್ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಜಲಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
MUST WATCH : ನಿಂತಿದ್ದ ಲಾರಿಗೆ ಗುದ್ದಿದ ಬಸ್ – ಪಾಪ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಂಭೀರ ಗಾಯ




