Udupi : ಯುವ ಕಾಂಗ್ರೆಸ್ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ಈ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. 5-6 ಜನ ಆರೋಪಿಗಳಿಗಾಗಿ ಖಾಕಿ ಹುಡುಕಾಟ ನಡೆಸುತ್ತಿದ್ದು, ಈ ಬಗ್ಗೆ ತನಿಖೆ ಮುಂದುವರಿದಿದೆ.

Udupi : ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಲ್ವಾರ್ಗಳು ಝಳಪಿಸಿದ ಭೀಕರ ಘಟನೆ ನಡೆದಿದೆ. ನಗರದ ಪಿಪಿಸಿ ಕ್ರಾಸ್ ಬಳಿ ಕಾಂಗ್ರೆಸ್ ಯುವ ಮುಖಂಡ ಹಾಗೂ ಎನ್ಎಸ್ಯುಐ ಉಪಾಧ್ಯಕ್ಷ ಶರತ್ ಕುಂದರ್ ಮೇಲೆ ದುಷ್ಕರ್ಮಿಗಳ ಗುಂಪೊಂದು ತಲ್ವಾರಿನಿಂದ ದಾಳಿ ನಡೆಸಿದೆ.
ಮಾತುಕತೆಗೆಂದು ಕರೆಸಿಕೊಂಡು ಹಠಾತ್ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ಘಟನೆಯಲ್ಲಿ ಶರತ್ ಕುಂದರ್ ಗಂಭೀರವಾಗಿ ಗಾಯಗೊಂಡಿದ್ದಾರೆ. 6–7 ಮಂದಿ ಆರೋಪಿಗಳು ಟಾಟಾ ಸಫಾರಿ ಹಾಗೂ ಮಹೀಂದ್ರ ಥಾರ್ ವಾಹನಗಳಲ್ಲಿ ಸ್ಥಳಕ್ಕೆ ಆಗಮಿಸಿ ತಲ್ವಾರಿನಿಂದ ಹಲ್ಲೆ ನಡೆಸಿದ್ದಾರೆ.
ದಾಳಿ ವೇಳೆ ಕೊಲೆ ಯತ್ನ ನಡೆಸಿದ್ದು, ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ ಆರೋಪವೂ ಕೇಳಿಬಂದಿದೆ. ಗಾಯಗೊಂಡ ಶರತ್ ಕುಂದರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ : ವರನನ್ನ ಮುಗಿಸಲು Loverಗೆ ಸುಪಾರಿ ಕೊಟ್ಟಿದ್ದೇ ವಧು..!
ಮಣಿಪಾಲದ ಹೋಟೆಲ್ ಒಂದರಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಹಳೆ ವೈಷಮ್ಯ ಅಥವಾ ವೈಯಕ್ತಿಕ ಕಲಹ ಈ ದಾಳಿಗೆ ಕಾರಣವೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಖಾಕಿ ಪಡೆ ಶೋಧ ಕಾರ್ಯ ಆರಂಭಿಸಿದೆ. ಸಿಸಿಟಿವಿ ದೃಶ್ಯಗಳು ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.
MUST WATCH : ನಿಂತಿದ್ದ ಲಾರಿಗೆ ಗುದ್ದಿದ ಬಸ್ – ಪಾಪ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಂಭೀರ ಗಾಯ




