ರಾಮನಗರ ಜಿಲ್ಲೆಯ ಕನಕಪುರದಲ್ಲಿ Gas ಸೋರಿಕೆಯಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ತಂದೆ, ತಾಯಿ ಮತ್ತು ಮಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಅಡುಗೆ ಮಾಡುವ ವೇಳೆ Gas ಸೋರಿಕೆಯಾಗಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಘಟನೆ ಪ್ರದೇಶದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.
ಮೃತರನ್ನು ಸಿದ್ದರಾಜು (55), ಚಂದ್ರಮ್ಮ (50) ಹಾಗೂ ಅವರ ಪುತ್ರ ಪ್ರಶಾಂತ್ (22) ಎಂದು ಗುರುತಿಸಲಾಗಿದೆ. ಇವರು ಕನಕಪುರ ನಗರದ ಅಮರನಾರಾಯಣ ಬ್ಲಾಕ್ನಲ್ಲಿ ವಾಸವಾಗಿದ್ದರು.
ನಾಲ್ಕು ದಿನಗಳ ಹಿಂದಿನ ಅವಘಡ
ಕಳೆದ ನಾಲ್ಕು ದಿನಗಳ ಹಿಂದೆ ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆಯಾಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡ ಕುಟುಂಬದ ಮೂವರನ್ನೂ ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ತಂದೆ, ತಾಯಿ ಮತ್ತು ಮಗ ಮೂವರೂ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಸಂಬಂಧಿಕರು ಮತ್ತು ಸ್ಥಳೀಯರಲ್ಲಿ ತೀವ್ರ ನೋವು ಹಾಗೂ ಕಂಬನಿಗೆ ಕಾರಣವಾಗಿದೆ.
ಇದನ್ನೂ ಓದಿ : ವರನನ್ನ ಮುಗಿಸಲು Loverಗೆ ಸುಪಾರಿ ಕೊಟ್ಟಿದ್ದೇ ವಧು..!
ಪೊಲೀಸ್ ಕ್ರಮ
ಈ ಅಗ್ನಿ ಅವಘಡ ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಒಂದೇ ಕುಟುಂಬದ ಮೂವರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಿಕರು ಮೃತರನ್ನು ನೆನೆದು ಕಂಬನಿ ಮಿಡಿದಿದ್ದಾರೆ. ಗ್ಯಾಸ್ ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯವೆಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
MUST WATCH : ನಿಂತಿದ್ದ ಲಾರಿಗೆ ಗುದ್ದಿದ ಬಸ್ – ಪಾಪ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಂಭೀರ ಗಾಯ




