Hassan ದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಂಜುನಾಥ್ (25) ಸಾವನ್ನಪ್ಪಿದ ಘಟನೆ ನೆಡೆದಿದೆ.

Hassan ಜಿಲ್ಲೆ, ಅರಸೀಕೆರೆ ತಾಲೂಕಿನ ಗವಿಮಠ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತರಾದವರು ಹಾರನಹಳ್ಳಿ ಗ್ರಾಮದ ಮಂಜುನಾಥ್ (25). ಕಾರಿನಲ್ಲಿ ಹಾರನಹಳ್ಳಿ ಗ್ರಾಮದ ಮಂಜುನಾಥ್, ಪವನ್ ಹಾಗೂ ನವೀನ್ ಬಾಣಾವರ ಕಡೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ : ವರನನ್ನ ಮುಗಿಸಲು Loverಗೆ ಸುಪಾರಿ ಕೊಟ್ಟಿದ್ದೇ ವಧು..!
ಅಗ್ನಿ ಮತ್ತು ನೆರವು
ಘಟನೆಯ ತಕ್ಷಣ ಕಾರಿಗೆ ಬೆಂಕಿ ಹೊತ್ತಿಕೊಂಡು, ಸ್ಥಳದಲ್ಲಿದ್ದವರು ಕಾರಿನೊಳಗಿದ್ದ ಮೂವರನ್ನು ಹೊರಗೆ ಕರೆ ತಂದರು. ಈ ವೇಳೆ ಮಂಜುನಾಥ್ ಮೃತಪಟ್ಟಿದ್ದಾರೆ. ನಂತರ ಅಗ್ನಿಶಾಮಕ ದಳ ಕಾರಿಗೆ ಬೆಂಕಿ ನಂದಿಸಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಇನ್ನಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಹಾಸನದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸ್ ಪರಿಶೀಲನೆ
ಈ ಘಟನೆ ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
MUST WATCH : ನಿಂತಿದ್ದ ಲಾರಿಗೆ ಗುದ್ದಿದ ಬಸ್ – ಪಾಪ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಂಭೀರ ಗಾಯ




