Chikkaballapura : ಬಾಲ್ಯವಿವಾಹ ಮಾಡಿಕೊಂಡಿದ್ದ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ವಿಷಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.

Chikkaballapura : ಬಾಲ್ಯವಿವಾಹ ಹಿನ್ನೆಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ಬಾಲ್ಯವಿವಾಹ ಹಿನ್ನೆಲೆ ಯುವಕ ಆತ್ಮಹತ್ಯೆ
ಮಂಜುನಾಥ್ (19) ಎಂಬ ಯುವಕ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ. ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯಡಿ ಚೇಳೂರು ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಮಂಜುನಾಥ್ ಇನ್ಸ್ಟಾಗ್ರಾಂ ಮೂಲಕ ಸಾತನೂರು ಮೂಲದ ಬಾಲಕಿಯನ್ನು ಪರಿಚಯವಾಗಿ ಬಳಿಕ 2025ರಲ್ಲಿ ಮದುವೆಯಾಗಿದ್ದರು. ಮಂಜುನಾಥ್ 18 ವರ್ಷದವನಾಗಿದ್ದಾಗ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗಿದ್ದನು ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಮೂರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!

POCSO ಪ್ರಕರಣ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ
ಬಾಲಕಿ ಅನಾರೋಗ್ಯವಾಗಿದೆ ಎಂದು ತಿಳಿದು ಇಬ್ಬರೂ ಬಾಗೇಪಲ್ಲಿ ಆಸ್ಪತ್ರೆಗೆ ಬಂದ ವೇಳೆ, ಬಾಲಕಿಯ ವಯಸ್ಸು ಕಡಿಮೆ ಎಂಬುದು ತಿಳಿದ ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬಾಲಕಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಅಲ್ಲದೇ ಪರಿಶೀಲನೆ ವೇಳೆ ಬಾಲಕಿ 8 ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಸದ್ಯ ಆಕೆಯನ್ನು ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಇರಿಸಲಾಗಿದೆ.
ಈ ನಡುವೆ ತನಗೆ ಕಾನೂನು ಸಮಸ್ಯೆ ಎದುರಾಗಬಹುದು ಎಂಬ ಭಯದಿಂದ ಮಂಜುನಾಥ್ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
MUST WATCH : ವರನ ಮೇಲೆ ಚಾಕು ಇರಿತ ಕೇಸ್ – ತನಿಖೆಯ ವೇಳೆ ಪೊಲೀಸರೇ ಶಾಕ್




