Belagavi : 10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು: ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ.

Belagavi ಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ವ್ಯಕ್ತಿಯನ್ನು ಕೊಂದು ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ. 16 ಬಾರಿ ಮಚ್ಚಿನಿಂದ ಕೊಚ್ಚಿ ಕ್ರೌರ್ಯ ಮೆರೆದಿದ್ದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ.
ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಹಂತಕ
ಹೌದು ಸೌದತ್ತಿ ತಾಲೂಕಿನ ಬಸಡೋಣಿ ಗ್ರಾಮದ ಬಸಪ್ಪ (56) ಎಂಬಾತನನ್ನು ನಡುವಿನ ರಸ್ತೆಯಲ್ಲಿಯೇ ಈರಪ್ಪ ಎಂಬಾತ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹತ್ಯೆಯ ಬಳಿಕ ಸಿನಿಮಾ ಸ್ಟೈಲ್ ನಲ್ಲಿ ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ. ನಿನ್ನೆ ಸಂಜೆ ಬಸಪ್ಪನ ಬೈಕ್ ಅಡಗಟ್ಟಿ ಈರಯ್ಯ ಎಂಬಾತ ಕೊಲೆ ಮಾಡಿದ್ದಾನೆ. ಪೊಲೀಸರಿಗೆ ಕರೆ ಮಾಡಿ ಕೊಲೆ ಮಾಡಿದ್ದಾಗಿ ಮಾಹಿತಿ ನೀಡಿದ್ದಾನೆ. ಅಲ್ಲದೇ ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ.
ಇದನ್ನು ಓದಿ : ಮಾಜಿ ಸಚಿವ Kagodu Thimmappa ಆಸ್ಪತ್ರೆಗೆ ದಾಖಲು
10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು
10 ವರ್ಷಗಳ ಹಿಂದೆ ಈರಯ್ಯ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು ವರ್ಷಗಳ ಬಳಿಕ ಈರಯ್ಯನ ತಾಯಿಯನ್ನ ಕೊಲ್ಹಾಪುರದಲ್ಲಿ ಬಿಟ್ಟು ಗ್ರಾಮಕ್ಕೆ ನಾಲ್ಕು ದಿನಗಳ ಹಿಂದೆಯಷ್ಟೇ ಬಸಪ್ಪ ಬಂದಿದ್ದ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಆರೋಪಿ ಈರಯ್ಯ ಆತನನ್ನು ಕೊಲೆ ಮಾಡಿದ್ದಾನೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

16 ಬಾರಿ ಮಚ್ಚಿನಿಂದ ಕೊಚ್ಚಿ ಕೊಲೆ
ಇನ್ನು ಬಸಪ್ಪ ಹೊಸಮನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಸಿನಿಮಾ ಸ್ಟೈಲ್ನಲ್ಲಿ ಶವದ ಮೇಲೆ ಕಾಲಿಟ್ಟು ಆರೋಪಿ ಈರಯ್ಯನೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದ. ನಿನ್ನೆ ಸಂಜೆ ಬಸಪ್ಪನ ಅಡ್ಡಗಟ್ಟಿ 16 ಬಾರಿ ಮಚ್ಚಿನಿಂದ ಕೊಚ್ಚಿ ಕೊಂದಿದ್ದ ಈತ, ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತಿದ್ದ ಎನ್ನಲಾಗಿದೆ. ಪ್ರಕರಣ ಸಂಬಂಧ ಆರೋಪಿ ಈರಯ್ಯನ ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ಪ್ರಕರಣ ದಾಖಲು
ಇನ್ನು ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಈರಪ್ಪನನ್ನು ವಶಕ್ಕೆ ಪಡೆದು ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣವನ್ನು ಸೌದತ್ತಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಲಾಗಿದೆ.

ಇದನ್ನು ನೋಡಿ : ಆರ್ಕೆಸ್ಟ್ರಾಗಳಿಂದ ಶ್ರೀಮಂತ ಮಕ್ಕಳು ಅಲ್ಲ ಬಡ ಮಕ್ಕಳು ಬೀದಿಗೆ..!?




