Chitradurga : ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೋಣೆಗೆ ಕರೆದು ಶಿಕ್ಷಕ ಹೀನ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿಯಿಂದ ಶಿಕ್ಷಕನ ವಿರುದ್ಧ ದೂರು ನೀಡಲಾಗಿದ್ದು, ಪೋಕ್ಸೊ ಪ್ರಕರಣ ದಾಖಲಾಗಿದೆ.

Chitradurga : ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಪ್ರತಿಷ್ಠಿತ ಮಠದ ಶಾಲೆಯಲ್ಲಿ ನೀಚ ಕೃತ್ಯ; ಶಿಕ್ಷಕ ಬಂಧನ
ಪ್ರತಿಷ್ಠಿತ ಮಠವೊಂದಕ್ಕೆ ಸೇರಿದ ಈ ಶಾಲೆಯಲ್ಲಿ ನಡೆದಿರುವ ಘಟನೆ ಪೋಷಕರು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಕ ರಂಗಣ್ಣ ಎಂಬಾತ ಸುಮಾರು ಆರು ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೋಣೆಗೆ ಕರೆದು ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ವಿಷಯ ಬೆಳಕಿಗೆ ಬಂದ ತಕ್ಷಣವೇ ಆಘಾತಕ್ಕೊಳಗಾದ ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮಕ್ಕೆ ಮುಂದಾಗಿದೆ.
ಇದನ್ನೂ ಓದಿ : ಅತ್ತಿಗೆ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಅಣ್ಣನಿಗೆ ಚಟ್ಟ ಕಟ್ಟಿದ ತಮ್ಮ.!

ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್
ಶಾಲಾ ಆಡಳಿತ ಸಮಿತಿಯವರು ಭರಮಸಾಗರ ಪೊಲೀಸ್ ಠಾಣೆಗೆ ತೆರಳಿ ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಶಿಕ್ಷಕ ರಂಗಣ್ಣನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಆರೋಪಿತ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಲಾಗಿದೆ.

ವಿದ್ಯಾರ್ಥಿನಿಯರ ಮಾನಸಿಕ ಹಾಗೂ ಶೈಕ್ಷಣಿಕ ಭದ್ರತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
MUST WATCH : C T RAVI ಕ್ಷಮೆಯಾಚಿಸುವಂತೆ ವಿ. ಪರಿಷತ್ ನಲ್ಲಿ ಪಟ್ಟು – ನಾನು ಕೇಳೋದಿಲ್ಲ ಎಂದ MLC




