Davanagere : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ಒಂಟಿ ವೃದ್ಧೆಯನ್ನು ಕೊಲೆಗೈದು 73 ಗ್ರಾಂ ಚಿನ್ನಾಭರಣ ದರೋಡೆ.!

ರಾಜ್ಯದಲ್ಲಿ ಮತ್ತೊಂದು ಭೀಕರ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, Davanagere ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ದುಷ್ಕರ್ಮಿಗಳು ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಇದನ್ನು ಓದಿ : ಮದುವೆ ಜಾತಕ ತೋರಿಸಲು ಹೋದಾಗ ಅರ್ಚಕನಿಂದ Rape

ಚಿನ್ನಾಭರಣಗಳನ್ನು ದೋಚಿ ಪರಾರಿ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯ ವೃದ್ದೆ ಕೊಲ್ಲಾರಿ ಕಮಲಮ್ಮ (64) ಅವರು ಒಂಟಿಯಾಗಿ ವಾಸವಾಗಿದ್ದರು.
ರಾತ್ರಿ ವೃದ್ಧೆ ಮಲಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರು ಕೂಗಾಡದಂತೆ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ವೃದ್ಧೆಯ ಮೈಮೇಲಿದ್ದ ಚಿನ್ನದ ಸರ ಸೇರಿದಂತೆ ಒಟ್ಟು 73 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಪ್ರಕರಣ ದಾಖಲು
ಘಟನೆಯ ಮಾಹಿತಿ ಪಡೆದ ನ್ಯಾಮತಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಆರಂಭಿಸಲಾಗಿದೆ.
ಇದನ್ನು ನೋಡಿ : ಅರೆಬರೆ ORCHESTRAಗಳು ಹುಟ್ಟಿಕೊಳ್ಳಲು ಇವರೇ ಕಾರಣನಾ..? TRUTH EXPOSED




