
HAVERI ACCIDENT : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿ ಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಎರಡು ತುಂಡುಗಳಾಗಿದೆ.
ಇನ್ನು ಈ ಅಪಘಾತ ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಬಳಿ ನಡೆದಿದೆ. ಕಬ್ಬಿಣ ತುಂಬಿದ ಡಿಕ್ಕಿಯ ರಭಸಕ್ಕೆ ಲಾರಿ ಎರಡು ಭಾಗವಾಗಿದೆ. ಎಂಜಿನ್ ಒಂದು ಕಡೆ, ಲಾರಿಯ ಹಿಂಭಾಗ ಇನ್ನೊಂದು ಕಡೆಯಾ ಗಿದೆ. ಲಾರಿ ಚಾಲಕ ಪ್ರಾಣಾಪಾಯಿಂದ ಪಾರಾಗಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಈ ಭೀಕರ ಘಟನೆ ರಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಕೆಲಕಾಲ ಟ್ರಾಫಿಕ್ ಅಸ್ತವ್ಯಸ್ತವಾಗಿತ್ತು. ಆದರೆ, ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.




