Vijayanagara : ಕೇರಳದಿಂದ (Kerala) ಹಂಪಿಗೆ (Hampi) ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ.

Vijayanagara : ಕೇರಳದಿಂದ ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಅಪಘಾತ
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ.!

ಶಿಕ್ಷಕಿ ಸೇರಿ ನಾಲ್ವರಿಗೆ ಗಂಭೀರ ಗಾಯ
ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಭೇಟಿ ಪರಿಶೀಲನೆ
ಘಟನೆಯ ಮಾಹಿತಿ ಪಡೆದ ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಸಾರ್ವಜನಿಕರು ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದರು. ಅಪಘಾತದ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

MUST WATCH : ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಹೆದ್ದಾರಿ ತಡೆಗೋಡೆ ಬಿದ್ದಿದ್ರು ರಿಪೇರಿ ಇಲ್ಲ




