Nelamangala : ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಸಾಲದ ಹಣವನ್ನೇ ಕಳ್ಳರು ದೋಚಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್ ಆಸ್ಪತ್ರೆ ಬಳಿ ನಡೆದಿದೆ.

Nelamangala : ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಸಾಲದ ಹಣವನ್ನೇ ಕಳ್ಳರು ದೋಚಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಗರೂರು ಸಮೀಪದ ಬಿಜಿಎಸ್ ಆಸ್ಪತ್ರೆ ಬಳಿ ನಡೆದಿದೆ.
ಪತ್ನಿಯ ಚಿಕಿತ್ಸೆಗೆ ಸಂಗ್ರಹಿಸಿದ್ದ ಹಣ ಕಳ್ಳರ ಪಾಲು
ಚಿಕ್ಕಬಾಣವರ ನಿವಾಸಿ ಹೇಮಣ್ಣ ಎಂಬುವವರು ತಮ್ಮ ಪತ್ನಿ ಅನಸೂಯ ಅವರಿಗೆ ಅನಾರೋಗ್ಯ ಹಿನ್ನೆಲೆ ಆಯುರ್ವೇದ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ತೆರಳಿದ್ದರು.
ಈ ವೇಳೆ ಚಿಕಿತ್ಸೆಗಾಗಿ ಹಾಗೂ ಮತ್ತೊಬ್ಬರಿಗೆ ಹಣ ನೀಡಬೇಕಿದ್ದ ಕಾರಣ ಹೇಮಣ್ಣ ಅವರು ಸುಮಾರು ₹2 ಲಕ್ಷ 50 ಸಾವಿರ ಸಾಲ ಪಡೆದು ಕಾರಿನಲ್ಲಿದ್ದ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದರು.
ಇದನ್ನೂ ಓದಿ: ಹಂಪಿಗೆ ತೆರಳುತ್ತಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿ.. ನಾಲ್ವರಿಗೆ ಗಂಭೀರ ಗಾಯ.!

ಆದರೆ, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಹೊರಬಂದು ವಾಪಸ್ ಬರುವಷ್ಟರಲ್ಲಿ ದುಷ್ಕರ್ಮಿಗಳು ಕಾರಿನ ಗ್ಲಾಸ್ ಒಡೆದು ಬ್ಯಾಗ್ನಲ್ಲಿದ್ದ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅನಾರೋಗ್ಯದಲ್ಲಿರುವ ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಹಣ ಕಳ್ಳರ ಪಾಲಾಗಿರುವುದರಿಂದ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.
MUST WATCH : ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧ ಮೈತ್ರಿ ನಾಯಕರು ಆಕ್ರೋಶ




