Newdelhi : ತಂಬಾಕು ಮೇಲಿನ ಶೇ18ರಷ್ಟು ಅಬಕಾರಿ ಸುಂಕವನ್ನು ವಾಪಸ್ ಪಡೆಯಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರವು ಕರ್ನಾಟಕದ ಜನರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ.

Newdelhi : ಕೇಂದ್ರ ಸರ್ಕಾರವು FCV ತಂಬಾಕು ಮೇಲಿನ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ವಾಪಸ್ ಪಡೆದಿದೆ. ಈ ಮಹತ್ವದ ನಿರ್ಧಾರದಿಂದ ಕರ್ನಾಟಕದ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ, ಅರಕಲಗೂಡು ಸೇರಿದಂತೆ ವಿವಿಧ ಭಾಗಗಳ ತಂಬಾಕು ಬೆಳೆಗಾರರಿಗೆ ಭಾರೀ ಅನುಕೂಲವಾಗಲಿದೆ.
ಕರ್ನಾಟಕದ ತಂಬಾಕು ಬೆಳೆಗಾರರಿಗೆ ಭರ್ಜರಿ ಗುಡ್ನ್ಯೂಸ್
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮಧ್ಯಪ್ರವೇಶ ಮತ್ತು ಪ್ರಯತ್ನದ ಫಲವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. FCV ತಂಬಾಕು ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿದ್ದರು.
ಪರಿಣಾಮವಾಗಿ ಬೆಳೆ ಮಾರಾಟವಾಗದೆ ತಂಬಾಕು ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.

ಎಚ್.ಡಿ. ಕುಮಾರಸ್ವಾಮಿ ಮಧ್ಯಪ್ರವೇಶಕ್ಕೆ ಫಲ
ತಂಬಾಕು ಬೆಳೆಗಾರರು ತಮ್ಮ ಸಂಕಷ್ಟವನ್ನು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಬಳಿ ಹೇಳಿಕೊಂಡಿದ್ರು. ಈ ಹಿನ್ನಲೆ ಸಚಿವರು ಬೆಂಗಳೂರಿನ ತಂಬಾಕು ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವಿಶಾಖಪಟ್ಟಣಂ ವಿಭಾಗದ ಕೇಂದ್ರೀಯ ಅಬಕಾರಿ ಮತ್ತು ಜಿಎಸ್ಟಿ ಮುಖ್ಯ ಆಯುಕ್ತರೊಂದಿಗೆ ನಡೆದಿದ್ದ ಪತ್ರ ವ್ಯವಹಾರಗಳ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿದ್ದರು.
ನಂತರ ಈ ವಿಷಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತಂದು, ತಂಬಾಕು ಮೇಲಿನ ಅಬಕಾರಿ ಸುಂಕವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದರು. ಸಚಿವರ ಮನವಿಗೆ ತಕ್ಷಣವೇ ಸ್ಪಂದಿಸಿದ ಹಣಕಾಸು ಸಚಿವೆ, ತಂಬಾಕು ಮೇಲಿನ ಅಬಕಾರಿ ಸುಂಕಕ್ಕೆ ವಿನಾಯಿತಿ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ : ರಾಜ್ಯದ Govt ಆಸ್ಪತ್ರೆಗಳಲ್ಲಿ ಔಷಧಿ ಕೊರತೆ.!
ತಕ್ಷಣ ಜಾರಿಗೆ ಆದೇಶ
ಈ ಸಂಬಂಧ ಫೆಬ್ರವರಿ 1ರಂದು ತಂಬಾಕು ಮಂಡಳಿ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಅಬಕಾರಿ ಸುಂಕವನ್ನು ಹಿಂಪಡೆಯಲಾಗಿದೆ. ಜೊತೆಗೆ ಫೆಬ್ರವರಿ 5ರಿಂದಲೇ ಹರಾಜು ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ತಂಬಾಕು ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದ್ದು, ತಮ್ಮ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಸಿಗುವ ನಿರೀಕ್ಷೆ ಮೂಡಿದೆ.
MUST WATCH : ನಿನ್ನ ಹೆಂಡ್ತಿ ಮತ್ತು ನೀನು ಇಬ್ರು ದುಡ್ ತಿಂದ್ರಿ – ಅಧಿವೇಶನದಲ್ಲಿ SHIVALINGE GOWDA ಫುಲ್ ಗರಂ




