
ಕರ್ನಾಟಕ ರಾಜ್ಯದ ಬಯಲುಸೀಮೆ, ಮಲೆನಾಡು, ಕರಾವಳಿ, ಕಲ್ಯಾಣ ಕರ್ನಾಟಕ ಸೇರಿದಂತೆ 19 ಜಿಲ್ಲೆಗಳು ಹಾಗೂ 47 ತಾಲ್ಲೂಕುಗಳಲ್ಲಿ 27 ಲಕ್ಷಕ್ಕೂ ಅತ್ಯಧಿಕ ಸಂಖ್ಯೆಯಲ್ಲಿರುವ ಸಮಸ್ತ ಕುಂಚಿಟಿಗರು ಒಗ್ಗಟ್ಟು ಪ್ರದರ್ಶನ ಮಾಡಿ, ಇದೇ ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಿರುವ ಜಾತಿಗಣತಿಯಲ್ಲಿ “ಕುಂಚಿಟಿಗ “ಎಂದು ಬರೆಯಿಸಬೇಕು ಎಂದು ಜೆಡಿಎಸ್ ತಾಲೂಕು ಅದ್ಯಕ್ಷ ಬಿ.ಎಸ್.ಸತ್ಯಪ್ರಕಾಶ್ ಶಿರಾದಲ್ಲಿ ತಿಳಿಸಿದ್ರು.
ನಗರದ ಕುಂಚಿಟಿಗರ ಸಂಘ ಆವರಣದಲ್ಲಿ ಮುಖಂಡರ ಸಭೆಯಲ್ಲಿ ಮಾತನಾಡುತ್ತಾ, ಕಳೆದ 1928ರಲ್ಲಿ ಮೈಸೂರು ಸರ್ಕಾರ ಹೊರಡಿಸಿದ ಆದೇಶ, ರಾಜ್ಯ ಸರ್ಕಾರ ನಡೆಸಿದ ಕುಲಶಾಸ್ತ್ರೀಯ ಅಧ್ಯಯನ ವರದಿ ಹಾಗೂ ವಿವಿಧ ತಾಲ್ಲೂಕಿನ ತಹಶೀಲ್ದಾರರಿಂದ, ಮಾಹಿತಿ ಹಕ್ಕಿನಡಿ ಪಡೆದ ದಾಖಲೆಗಳ ಪ್ರಕಾರ, ಕುಂಚಿಟಿಗ ಯಾವುದೇ ಜಾತಿಯ ಉಪಜಾತಿ ಅಲ್ಲ. ಆದ್ದರಿಂದ ಉಪಜಾತಿ ಕಾಲಂನಲ್ಲಿ ಇಲ್ಲ ಎಂದು ಬರೆಯಿಸಲು ಸರ್ಕಾರಿ ದಾಖಲೆಗಳ ಸಹಿತ ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕುಂಚಿಟಿಗರ ಸಂಘದ ಅಧ್ಯಕ್ಷರಾದ ಮುಕುಂದಪ್ಪ , ಮುಖಂಡರಾ ಆರ್ ನಾಗರಾಜ್ ಆರ್ ಉಗ್ರೇಶ್ ಸೇರಿದಂತೆ ಹಲವಾರು ಪ್ರಮುಖರು ಹಾಜರಿದ್ದರು.




