Hasan : ಮನೆ ಸೀಜ್ ಮಾಡೋದಾಗಿ ಫೈನಾನ್ಸ್ (Finance) ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

Hasan : ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರವಣಬೆಳಗೊಳ ಸಮೀಪದ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ.
ಫೈನಾನ್ಸ್ ಸಿಬ್ಬಂದಿ ಬೆದರಿಕೆಗೆ ರೈತನ ಆತ್ಮಹತ್ಯೆ
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಯೋಗೇಶ್ (50) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣದ ಫೈನಾನ್ಸ್ ಸಂಸ್ಥೆಯೊಂದರಲ್ಲಿ ಸುಮಾರು 7 ಲಕ್ಷ ರೂ. ಸಾಲ ಪಡೆದಿದ್ದರು.
ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ಕಂತುಗಳನ್ನು ಕಟ್ಟುತ್ತಿದ್ದ ಯೋಗೇಶ್, ವೈಯಕ್ತಿಕ ಸಮಸ್ಯೆಗಳ ಕಾರಣದಿಂದ ಕಳೆದ ಎರಡು ತಿಂಗಳ ಕಂತುಗಳನ್ನು ಬಾಕಿ ಉಳಿಸಿಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ : Car ಸರ್ವಿಸ್ ಸೆಂಟರ್ನಲ್ಲಿ ಭೀಕರ ಅಗ್ನಿ ಅವಘಡ.!

ಎರಡು ತಿಂಗಳ ಕಂತು ಬಾಕಿ: ರೈತನ ಜೀವ ಬಲಿ
ಫೆಬ್ರವರಿ 4ರ ರಾತ್ರಿ ಯೋಗೇಶ್ ಅವರ ಮನೆಗೆ ಆಗಮಿಸಿದ ಇಬ್ಬರು ಫೈನಾನ್ಸ್ ಸಿಬ್ಬಂದಿ, ಮನೆ ಸೀಜ್ ಮಾಡಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ಈ ಅವಮಾನ ಮತ್ತು ಮಾನಸಿಕ ಒತ್ತಡದಿಂದ ಮನನೊಂದ ಯೋಗೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಫೈನಾನ್ಸ್ ಸಂಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಈ ಘಟನೆ ಮತ್ತೆ ಫೈನಾನ್ಸ್ ಸಂಸ್ಥೆಗಳ ಸಾಲ ವಸೂಲಾತಿ ಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ.
MUST WATCH : ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡರು ಕೈ ಮುಗಿದು ಮನವಿ ಮಾಡಿಕೊಂಡಿದ್ದು ಯಾಕೆ?




