Bengaluru : ಉದ್ಯಮಿ CJ Roy ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್.

ಕಾನ್ಫಿಡೆಂಟ್ ಸಂಸ್ಥೆಯ ಚೇರ್ಮನ್ ಹಾಗೂ ಉದ್ಯಮಿ ಸಿಜೆ ರಾಯ್ ಸೀರಿಯಲ್ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಮತ್ತೊಂದು ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಹೂಡಿಕೆದಾರರಿಗೆ ಹಣ ಹಿಂತಿರುಗಿಸಲು ಸಾಧ್ಯವಾಗದೇ ಮಾನಸಿಕ ಒತ್ತಡಕ್ಕೆ ಒಳಗಾಗಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಎಸ್ಐಟಿ (SIT) ತನಿಖೆಯಿಂದ ತಿಳಿದು ಬಂದಿದೆ.
ಇದನ್ನು ಓದಿ : ಇಂಜಿನಿಯರ್ ಮನೆಗಳ ಮೇಲೆ ಲೋಕಾಯುಕ್ತ ದಾಳಿ – 60 ಲಕ್ಷ ನಗದು ಹಣ ಪತ್ತೆ!

SIT ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು!
CJ Roy ಆತ್ಮಹತ್ಯೆ ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು SITಗೆ ವಹಿಸಿತ್ತು. ತನಿಖೆ ವೇಳೆ ರಾಯ್ ಅವರಿಗೆ ಸೇರಿದ ಡೈರಿ ಪತ್ತೆಯಾಗಿದ್ದು, ಅದರಲ್ಲಿ ಹಲವಾರು ವಿಚಾರಗಳನ್ನು ರಾಯ್ ಉಲ್ಲೇಖಿಸಿದ್ದರು. ಅಲ್ಲದೆ ಮರಣೋತ್ತರ ಪರೀಕ್ಷೆಯ ವೇಳೆ ಮಾನಸಿಕ ಒತ್ತಡ ಹಾಗೂ ಖಿನ್ನತೆಯಿಂದ ರಾಯ್ ಬಳಲುತ್ತಿದ್ದರು ಎಂದು ವರದಿಯಲ್ಲಿ ತಿಳಿದು ಬಂದಿದೆ.

ಮಾನಸಿಕ ಖಿನ್ನತೆಗೆ ಒಳಗಾಗಿ Suicide
ಇದೀಗ SIT ಅಧಿಕಾರಿಗಳು ತನಿಖೆ ನಡೆಸಿದ ವೇಳೆ ಹೂಡಿಕೆದಾರರಿಗೆ ರಾಯ್ ಹಣ ಹಿಂತಿರುಗಿಸಿದೆ ಇದುದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ನೋಡಿ : ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ಗೊರವಯ್ಯನ ಭವಿಷ್ಯ ವಾಣಿಗೆ ಭಕ್ತರು ಶಾಕ್




