Bengaluru : ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.

Bengaluru : ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪರ ಹೈಕೋರ್ಟ್ ಬಿಗ್ ಶಾಕ್ ನೀಡಿ ಆದೇಶ ಹೊರಡಿಸಿದೆ.
ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣ
ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ರೇವಣ್ಣ ಅವರ ವಿರುದ್ಧ ದೋಷಾರೋಪ ಹೊರಿಸದಂತೆ ಈ ಹಿಂದೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಇಂದು(ಫೆ.5) ತೆರವುಗೊಳಿಸಿದೆ.
ಪ್ರಕರಣ ರದ್ದು ಮಾಡಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಸುನಿಲ್ ದತ್ ಯಾದವ್ ಅವರ ನೇತೃತ್ವದ ಹೈಕೋರ್ಟ್ ಪೀಠ ಪರಿಶೀಲಿಸಿ ತಿರಸ್ಕರಿಸಿದೆ.
ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಈ ವೇಳೆ ರೇವಣ್ಣ ಅವರಿಗೆ ಕಾನೂನು ಸಂಕಷ್ಟ ಹೆಚ್ಚಿಸುವ ಸೂಚನೆ ನೀಡಿವೆ.

ಹೈಕೋರ್ಟ್ ಹೆಚ್.ಡಿ.ರೇವಣ್ಣ ಮಧ್ಯಂತರ ತಡೆಯಾಜ್ಞೆ ರದ್ದು
ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಇರುವ ಕಾರಣದಿಂದ ವಿಳಂಬವನ್ನು ಮನವಿ ಮಾಡಿದ್ದರು. ಆದರೆ, ಹೈಕೋರ್ಟ್ ಈ ಮನವಿಗೆ ಅಸಮಾಧಾನ ವ್ಯಕ್ತಪಡಿಸಿದೆ.
ವಕೀಲರಿಗೆ, “ಇದು ಸಾಂವಿಧಾನಿಕ ನ್ಯಾಯಾಲಯ. ಮ್ಯಾಜಿಸ್ಟ್ರೇಟ್ ಕೋರ್ಟ್ ನೆಪವೊಡ್ಡಿ ಇಲ್ಲಿನ ವಿಚಾರಣೆ ಮುಂದೂಡಲು ಕೋರುವುದು ಸರಿಯಲ್ಲ. ಈ ನ್ಯಾಯಾಲಯದ ಅಧಿಕಾರವನ್ನು ಕುಗ್ಗಿಸಬೇಡಿ. ಇದು ಅಹಂನ ವಿಚಾರವಲ್ಲ, ಆದರೆ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ನಿಮಗೆ ತಿಳಿದಿರಬೇಕು,” ಎಂದಿದ್ದಾರೆ.
ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಹೈಕೋರ್ಟ್ ಮೂಲಕ ತೆರವುಗೊಳಿಸಲಾಗಿದೆ, ವಾದ ಮಂಡನೆಗೆ ಅವಕಾಶ ನೀಡಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿತು.
ಇದನ್ನೂ ಓದಿ: ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ HDK..!!

ರೇವಣ್ಣ ಅವರ ವಿರುದ್ಧ ಕೆಳಹಂತದ ನ್ಯಾಯಾಲಯದಲ್ಲಿ ದೋಷಾರೋಪ ಹೊರಿಸದಂತೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಇದರಿಂದಾಗಿ ತನಿಖಾ ಸಂಸ್ಥೆಗೆ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳಲು ಹಾದಿ ಸುಗಮವಾದಂತಾಗಿದೆ.
MUST WATCH : ಮರ್ಯಾದೆ ಇದ್ರೆ ನಾನು ಕಳ್ಳ ಅಂತಾ ಸಾಬೀತು ಮಾಡಿ-ಶಿವಲಿಂಗೇಗೌಡ




